ಬೆಳ್ತಂಗಡಿ ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2021-22ನೇ ಸಾಲಿನಲ್ಲಿ 100% ಸಾಲ ವಸೂಲಾತಿ ಮಾಡಿದ ಸಾಧನೆಯನ್ನು ಗುರುತಿಸಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಸಂಘಕ್ಕೆ ಸಾಧನ ಪ್ರಶಸ್ತಿಯನ್ನು ನೀಡಿ ಪುರಸ್ಕರಿಸಿದೆ. ಆಗಸ್ಟ್ 5ರಂದು ಮಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ನಡೆದ ಬ್ಯಾಂಕಿನ ಮಹಾಸಭೆಯಲ್ಲಿ ಬ್ಯಾಂಕ್‌ನ ಅಧ್ಯಕ್ಷ ಡಾ. ಎಮ್. ಎನ್. ರಾಜೇಂದ್ರಕುಮಾರ್ ಸಂಘದ ಅಧ್ಯಕ್ಷ ನಿರಂಜನ್ ಬಾವಂತಬೆಟ್ಟು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಂದ್ರ ಪ್ರಸಾದ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಜಯವಿಕ್ರಮ್, ಲಿಂಗಪ್ಪ ನಾಯ್ಕ್, ನವೋದಯ ಪ್ರತಿನಿಧಿ ಕೋಟಿಯಪ್ಪ, ಜಿಲ್ಲಾ ಬ್ಯಾಂಕಿನ ನಿರ್ದೇಶಕರುಗಳು ಹಾಜರಿದ್ದರು.






