ಬೆಳ್ತಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಂಸ್ಥಾಪಕರಾದ ಡಿ. ರತ್ನವರ್ಮ ಹೆಗ್ಗಡೆ ಅವರ ಸ್ಮರಣಾರ್ಥ ಆಗಸ್ಟ್ 17ರಂದು ಬುಧವಾರ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಅಂತರ್ ಕಾಲೇಜು ಮಟ್ಟದ ಚರ್ಚಾಸ್ಪರ್ಧೆ ನಡೆಯಲಿದೆ.ಕಾಲೇಜಿನ ಸೆಮಿನಾರ್ ಹಾಲ್ನಲ್ಲಿ ನಡೆಯುವ ಈ ಸ್ಪರ್ಧೆಯನ್ನು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಉದ್ಘಾಟಿಸಲಿದ್ದು, ಕಾಲೇಜಿನ ಉಪ ಪ್ರಾಂಶುಪಾಲ ಡಾ. ಎ. ಜಯ ಕುಮಾರ್ ಶೆಟ್ಟಿ ಪಾಲ್ಗೊಳ್ಳುವರು. ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ 3 ಜಿಲ್ಲೆಗಳ ಪದವಿ ಕಾಲೇಜುಗಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.





