ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಥಮ ಬ್ಯಾಚ್‌ನ ವಿದ್ಯಾರ್ಥಿ ಡಿ.ಎ. ಆಗ್ನೇಯ ಜೆ.ಇ.ಇ. ಅಡ್ವಾನ್ಸ್ ಪರೀಕ್ಷೆಯಲ್ಲಿ ಅರ್ಹತೆ ಪಡೆದು ಐ.ಐ.ಟಿಯಲ್ಲಿ ಉನ್ನತ ವ್ಯಾಸಂಗ ನಡೆಸಲು ಆಯ್ಕೆಯಾಗಿದ್ದಾರೆ. ದೇಶದ 9.5 ಲಕ್ಷ ವಿಜ್ಞಾನ ವಿದ್ಯಾರ್ಥಿಗಳು ಜೆ.ಇ.ಇ. ಪರೀಕ್ಷೆಗೆ ಹಾಜರಾಗಿದ್ದು, ಆಯ್ಕೆಯಾದವರು ಕೇವಲ 1.5 ಲಕ್ಷ ವಿದ್ಯಾರ್ಥಿಗಳು ಮಾತ್ರ. ಅತ್ಯುತ್ತಮ ತರಬೇತಿ ಪಡೆದ ವಿದ್ಯಾರ್ಥಿಗಳು ಮಾತ್ರ ಐ.ಐ.ಟಿ.ಯಲ್ಲಿ ಸ್ಥಾನ ಪಡೆಯಲು ಸಾಧ್ಯ. ಆಗ್ನೇಯ ಅವರು ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಅಭ್ಯಾಸ ನಡೆಸಿ, ದ್ವಿತೀಯ ಪಿಯುಸಿ ಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದಿದ್ದರು. ಇದೀಗ ಐ.ಐ.ಟಿ.ಗೆ ಪ್ರವೇಶಾತಿ ಪಡೆಯುವ ಮೂಲಕ ದೇಶದ ಉನ್ನತ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶಿಕ್ಷಣ ಮುಂದುವರಿಸುವ ಅವಕಾಶವನ್ನು ಗಳಿಸಿ ಕೊಂಡಿದ್ದಾರೆ. ಕೇರಳದ ತಿರುವನಂತಪುರದ ಐ.ಐ.ಟಿ.ಯಲ್ಲಿ ಆಗ್ನೇಯ ಅವರು ವಿದ್ಯಾಭ್ಯಾಸ ಮುಂದುವರಿಸಲಿದ್ದಾರೆ.
ಅವರನ್ನು ಎಕ್ಸೆಲ್ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ , ಪ್ರಾಂಶುಪಾಲರು, ಪ್ರಾಧ್ಯಾಪಕ ವೃಂದದವರು ಅಭಿನಂದಿಸಿದ್ದಾರೆ.






