ರಾಜ್ಯ ಸರಕಾರಿ ನೌಕರರ ಸೊಸೈಟಿ ಮಹಾಸಭೆ

ರಾಜ್ಯ ಸರಕಾರಿ ನೌಕರರ ಸೊಸೈಟಿ ಮಹಾಸಭೆ
Facebook
Twitter
LinkedIn
WhatsApp

ಬೆಳ್ತಂಗಡಿ: ರಾಜ್ಯ ಸರಕಾರಿ ನೌಕರರ ವಿವಿಧೋದ್ಧೇಶ ಸಹಕಾರಿ ಸಂಘದ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 18ರಂದು ರಾಜ್ಯ ಸರಕಾರಿ ನೌಕರರ ಸಂಘದ ‘ಏಕತಾ ಸೌಧ’ ಸಭಾಭವನದಲ್ಲಿ ಸಹಕಾರಿ ಸಂಘದ ಅಧ್ಯಕ್ಷ ಜಯಕೀರ್ತಿ ಜೈನ್‌ರ ಅಧ್ಯಕ್ಷತೆಯಲ್ಲಿ ನಡೆಯಿತು.ಮಹಾಸಭೆಯನ್ನುದ್ಧೇಶಿಸಿ ಮಾತನಾಡಿದ ಅಧ್ಯಕ್ಷ ಜಯಕೀರ್ತಿ ಜೈನ್, ಸಂಘದ ಬೆಳವಣಿಗೆಗೆ ಸಹಕರಿಸಿದ ಸರ್ವರನ್ನು ಕೃತಜ್ಞತೆಯಿಂದ ಸ್ಮರಿಸಿದರಲ್ಲದೇ; ವರದಿ ವರ್ಷದಲ್ಲಿ ಸಂಘದ ಸದಸ್ಯರಿಗೆ 20% ಡಿವಿಡೆಂಡ್ ಘೋಷಿಸಿದರು. ಕ್ಲಪ್ತ ಸಮಯದಲ್ಲಿ ಸಾಲ ಮರುಪಾವತಿ ಮಾಡಿದ ಸದಸ್ಯರನ್ನು ಅಭಿನಂದಿಸಲಾಯಿತು.ಮಹಾಸಭೆಗೆ ಆಗಮಿಸಿದ ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಪೃಥ್ವಿ ಸಾನಿಕಮ್ ಸಂಘದ ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವತ್ಸಲಾ ಸಂಘದ ವಾರ್ಷಿಕ ವರದಿ ಹಾಗೂ ಜಮಾ-ಖರ್ಚಿನ ವಿವರವನ್ನು ಸಭೆಯಲ್ಲಿ ಮಂಡಿಸಿ, ಅನುಮೋದನೆ ಪಡೆದರು‌. ಸಂಘದ ಉಪಾಧ್ಯಕ್ಷ ಚಿದಾನಂದ ಹೂಗಾರ್, ಸಲಹೆಗಾರ ವಸಂತ ಸುವರ್ಣ, ನಿರ್ದೇಶಕರಾದ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಜಯರಾಜ್ ಜೈನ್, ಗಂಗಾರಾಣಿ ನಾ. ಜೋಷಿ, ಹಿಮಪ್ರಭಾ, ಪರಮೇಶ್ವರ್, ಅಬ್ದುಲ್ ರಝಾಕ್, ಚಂದ್ರಶೇಖರ್, ಆರತಿ, ರತ್ನಾವತಿ, ಸಂಘದ ಕೊಕ್ಕಡ ಜನನಶಾಖಾ ವ್ಯವಸ್ಥಾಪಕ ಅತಿಶಯ ಜೈನ್, ಸಿಬ್ಬಂದಿ ವಿಶಾಲ, ದೈನಿಕ ಠೇವಣಿ ಸಂಗ್ರಾಹಕರು ಹಾಗೂ ಸಂಘದ ಸದಸ್ಯರು ಭಾಗವಹಿಸಿದ್ದರು. ಸಂಘದ ಸಲಹೆಗಾರ ವಸಂತ ಸುವರ್ಣ ನಿರೂಪಿಸಿದ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಚಿದಾನಂದ ಹೂಗಾರ್ ವಂದಿಸಿದರು.

Latest 5

Related Posts