ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಗಳಿಂದ ರಕ್ತದಾನ

ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಗಳಿಂದ ರಕ್ತದಾನ
Facebook
Twitter
LinkedIn
WhatsApp

ಬೆಳ್ತಂಗಡಿ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಅಕ್ಟೋಬರ್ 1ರಂದು ‘ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನ’ ದ ಪ್ರಯುಕ್ತ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯ ಪ್ರಾದೇಶಿಕ ರಕ್ತ ಪೂರಣ ಕೇಂದ್ರದ ಸಹಯೋಗದಲ್ಲಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳಿಂದ ರಕ್ತ ದಾನ ಶಿಬಿರ ನಡೆಯಿತು.ಕಾಲೇಜು ಪ್ರಾಂಶುಪಾಲ ಡಾ| ಪ್ರಶಾಂತ್ ಶೆಟ್ಟಿಯವರು ಶಿಬಿರದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವೆನ್ಲೋಕ್ ರಕ್ತಬ್ಯಾಂಕ್‌ನ ಅಧಿಕಾರಿಗಳಾದ ಅಶೋಕ್, ಡಾ| ವಿದ್ಯಾಶ್ರೀ, ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಸುಲೈಮಾನ್ ಬೆಳಾಲು, ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿಗಳಾದ ಜ್ಯೋತ್ಸ್ನಾ ಹಾಗೂ ಧರ್ಮೆಂದ್ರ ಉಪಸ್ಥಿತರಿದ್ದರು.

Latest 5

Related Posts