ಬೆಳ್ತಂಗಡಿ: ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾದ ವ್ಯವಸ್ಥೆ ಕಲ್ಪಿಸುತ್ತಿಲ್ಲ ಎಂಬ ದೂರು ರೋಗಿಗಳಿಂದ ಬೆಳ್ತಂಗಡಿ ತಹಶೀಲ್ದಾರ್ಗೆ ಬಂದ ಹಿನ್ನೆಲೆಯಲ್ಲಿ ಅಕ್ಟೋಬರ್ 29ರಂದು ದಿಢೀರ್ ಆಸ್ಪತ್ರೆಗೆ ಭೇಟಿ ನೀಡಿ, ಡಯಾಲಿಸಿಸ್ ವಿಭಾಗದಲ್ಲಿ ಅವ್ಯವಸ್ಥೆಯನ್ನು ಕಣ್ಣಾರೆ ಕಂಡು, ಕರ್ತವ್ಯದಲ್ಲಿದ್ದ ತಹಶೀಲ್ದಾರ್ ಪೃಥ್ವಿ ಸಾನಿಕಾಂ ತರಾಟೆಗೆ ತೆಗೆದುಕೊಂಡರು.ತಾಲೂಕು ಆರೋಗ್ಯ ಕೇಂದ್ರ ಬೆಳ್ತಂಗಡಿ ಇಲ್ಲಿಯ ಡಯಾಲಿಸಿಸ್ ವಿಭಾಗದಲ್ಲಿ ಇನ್ವರ್ಟರ್ ಸಮಸ್ಯೆಯಿಂದ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ ಎಂಬ ದೂರು ರೋಗಿಗಳಿಂದ ಬೆಳ್ತಂಗಡಿ ತಹಶೀಲ್ದಾರ್ ಕಚೇರಿಗೆ ಬಂದಿತ್ತು. ಅಕ್ಟೋಬರ್ 29ರಂದು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಾಂ ಮತ್ತು ತಂಡ ದಿಢೀರ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಇನ್ವರ್ಟರ್ ನಿರ್ವಹಣೆಯಲ್ಲಿ ಸಮಸ್ಯೆ ಕಂಡು ಬಂತು. ನಂತರ ವೈದ್ಯಾಧಿಕಾರಿ ಚಂದ್ರಕಾಂತ್ ಮತ್ತು ಸಿಬ್ಬಂದಿಗಳನ್ನು ಕರೆದು ಆಸ್ಪತ್ರೆಯ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರಲ್ಲದೇ; ಇನ್ವರ್ಟರ್ ನಿರ್ವಹಣೆಗೆ ಸೂಕ್ತ ಕ್ರಮಕೈಗೊಳ್ಳಲು ವಿಳಂಬ ನೀತಿ ಅನುಸರಿಸುತ್ತಿರುವ ಆಸ್ಪತ್ರೆಯ ಆಡಳಿತ ವ್ಯವಸ್ಥೆಯನ್ನು ತರಾಟೆಗೆ ತೆಗೆದುಕೊಂಡರು. ಅದಲ್ಲದೆ ಏಜೆನ್ಸಿಗೆ ತಕ್ಷಣ ಪತ್ರ ಬರೆದು ಸಮಸ್ಯೆ ಬಗೆಹರಿಸಲು ಸೂಚಿಸಿದರು.ತಹಶೀಲ್ದಾರ್ ಪೃಥ್ವಿ ಸಾನಿಕಾಂರ ಜೊತೆ ಕಂದಾಯ ನಿರೀಕ್ಷಕ ಪ್ರತೀಶ್ ಮತ್ತು ಚಾಲಕ ಸಂತೋಷ್ ಇದ್ದರು.






