ಯಕ್ಷಗಾನ ಬಯಲಾಟದ ಆಮಂತ್ರಣ ಬಿಡುಗಡೆ

ಯಕ್ಷಗಾನ ಬಯಲಾಟದ ಆಮಂತ್ರಣ ಬಿಡುಗಡೆ
Facebook
Twitter
LinkedIn
WhatsApp

ಬೆಳ್ತಂಗಡಿ: ಯಕ್ಷ ಬಳಗ ಬೆಳ್ತಂಗಡಿಯ ಆಶ್ರಯದಲ್ಲಿ ಯಕ್ಷ ಬಳಗ ಅಳದಂಗಡಿ ವಲಯ ಸಮಿತಿಯ ಸಹಕಾರದಲ್ಲಿ ಮೂಲಕ್ಷೇತ್ರ ಶ್ರೀ ಕ್ಷೇತ್ರ ಗೆಜ್ಜೆಗಿರಿ ಶ್ರೀ ಆದಿ ಧೂಮಾವತಿ ಶ್ರೀ ದೇಯಿಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿಯವರು ನವೆಂಬರ್ 28ರಂದು ಸಂಜೆ ಗಂಟೆ 6-00ರಿಂದ ಅಳದಂಗಡಿಯ ಬಸ್ ನಿಲ್ದಾಣದ ಬಳಿ ಆಡಿ ತೋರಿಸಲಿರುವ ‘ಶ್ರೀ ಕ್ಷೇತ್ರ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ’ ಎಂಬ ಕಥಾನಕದ ಕಾಲಮಿತಿಯ ಯಕ್ಷಗಾನ ಬಯಲಾಟದ ಆಮಂತ್ರಣ ಪತ್ರಿಕೆಯನ್ನು ನವೆಂಬರ್ 17ರಂದು ಅಳದಂಗಡಿ ಅರಮನೆಯ ವಠಾರದಲ್ಲಿ ಡಾ| ಪದ್ಮಪ್ರಸಾದ್ ಅಜಿಲರು ಬಿಡುಗಡೆಗೊಳಿಸಿ, ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಬೆಳ್ತಂಗಡಿ ಯಕ್ಷ ಬಳಗದ ಗೌರವಾಧ್ಯಕ್ಷರಾದ ರಕ್ಷಿತ್ ಶಿವರಾಂ, ಅಧ್ಯಕ್ಷ ಸಂತೋಷ್ ಗೌಡ ವಳಂಬ್ರ, ಕಾರ್ಯದರ್ಶಿ ನಿತ್ಯಾನಂದ ನಾವರ, ಕೋಶಾಧಿಕಾರಿ ಶೇಖರ್ ಕುಕ್ಕೇಡಿ, ಅಳದಂಗಡಿ ವಲಯ ಯಕ್ಷ ಬಳಗದ ಗೌರವಾಧ್ಯಕ್ಷ ಸಂಜೀವ ಪೂಜಾರಿ ಕೊಡಂಗೆ, ಅಧ್ಯಕ್ಷ ಸುಭಾಶ್ಚಂದ್ರ ರೈ ಪಡ್ಯೋಡಿಗುತ್ತು, ಕಾರ್ಯದರ್ಶಿ ವೀರೇಂದ್ರ ಕುಮಾರ್ ಜೈನ್, ಕೋಶಾಧಿಕಾರಿ ಚಂದ್ರಶೇಖರ್ ಅಳದಂಗಡಿ ಹಾಗೂ ಯಕ್ಷ ಬಳಗದ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Latest 5

Related Posts