ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

Facebook
Twitter
LinkedIn
WhatsApp

ಬೆಳ್ತಂಗಡಿ: ಉಜಿರೆಯಲ್ಲಿ ಫೆಬ್ರವರಿ 3ರಿಂದ 5ರತನಕ ನಡೆಯುವಬದಕ್ಷಿಣ ಕನ್ನಡ ಜಿಲ್ಲೆಯ 25ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಜನವರಿ 22ರಂದು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಸಮ್ಮೇಳನ ಸರ್ವಾಧ್ಯಕ್ಷರಾಗಿರುವ ಡಾ. ಹೇಮಾವತಿ ವೀ. ಹೆಗ್ಗಡೆಯವರಿಗೆ ಆಮಂತ್ರಣ ಪತ್ರಿಕೆಯನ್ನು ನೀಡಿ ಆಹ್ವಾನಿಸಲಾಯಿತು.ಕನ್ನಡ ಸಾಹಿತ್ಯ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್, ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ಯದುಪತಿ ಗೌಡ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ, ಕೇಶವ ಭಟ್ ಅತ್ತಾಜೆ, ಸಮ್ಮೇಳನ ಸಮಿತಿಯ ಕಾರ್ಯದರ್ಶಿ ರಮೇಶ ಮಯ್ಯ, ಹರ್ಷಕುಮಾರ್, ಕಲಾವತಿ, ಅಖಿಲ ಭಾರತ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ ರವೀಂದ್ರ ಶೆಟ್ಟಿ, ರಾಮಕೃಷ್ಣ ಭಟ್ ಬಳಂಜ, ಹರೀಶ್ ರಾವ್ ಮುಂಡ್ರುಪಾಡಿ ಹಾಜರಿದ್ದರು.

Latest News

Related Posts