ಉಜಿರೆ ಗ್ರಾಮ ಪಂಚಾಯತ್‌ಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಧಾನ

Facebook
Twitter
LinkedIn
WhatsApp


ಬೆಳ್ತಂಗಡಿ: ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಆಯೋಜಿಸಿದ್ದ ಮಹಾತ್ಮಾ  ಗಾಂಧಿ ಗ್ರಾಮ ಪುರಸ್ಕಾರ  ಮತ್ತು ಮಹಾತ್ಮಾ ಗಾಂಧಿ ನರೇಗಾ ಪ್ರಶಸ್ತಿ ಪ್ರದಾನ  ಸಮಾರಂಭ ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಮಾರ್ಚ್ 24ರಂದು ರಾಜ್ಯದ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಉಪಸ್ಥಿತಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಗಾಂಧಿ ಗ್ರಾಮ ಪುರಸ್ಕಾರ ವಿಜೇತ ಉಜಿರೆ ಗ್ರಾಮ ಪಂಚಾಯಿತ್‌ಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಲಾಯಿತು.
5 ಲಕ್ಷ ರೂಪಾಯಿ ನಗದು ಬಹುಮಾನದ ಚೆಕ್, ಪ್ರಶಸ್ತಿ ಫಲಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಂದಾಯ ಸಚಿವ  ಆರ್. ಅಶೋಕ್ ಹಾಗೂ ಇತರ ಸಚಿವರು, ಶಾಸಕರು, ವಿಧಾನ ಪರಿಷತ್ ಶಾಸಕರ  ಉಪಸ್ಥಿತಿಯಲ್ಲಿ ಪ್ರದಾನ ಮಾಡಲಾಯಿತು.
ಪ್ರತಿ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಒಂದು ಗ್ರಾಮ ಪಂಚಾಯತ್‌ನ್ನು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿತ್ತು. ಜೀವನದ ಗುಣಮಟ್ಟ ಸುಧಾರಣೆಗೆ ಕೈಗೊಂಡಿರುವ ಕ್ರಮ, ಹಣಕಾಸಿನ ನಿರ್ವಹಣೆ, ಮೂಲಭೂತ ಸೌಕರ್ಯ, ಉತ್ತಮ ಆಡಳಿತ, ಪಂಚಾಯತ್ ನೀಡುವ ಸೇವೆ,  ವಿನೂತನ ಪ್ರಯೋಗಗಳು ಮತ್ತು ಕೋವಿಡ್ ನಿರ್ವಹಣೆಯನ್ನು ಆಧರಿಸಿ ಉಜಿರೆ ಗ್ರಾಮ ಪಂಚಾಯತ್‌ನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ, ಉಪಾಧ್ಯಕ್ಷ ರವಿಕುಮಾರ್ ಬರೆಮೇಲು, ಪಂಚಾಯತ್ ಅಭಿವೃದ್ಧಿ ಅಧಿಕಾರಿ  ಪ್ರಕಾಶ್ ಶೆಟ್ಟಿ ನೊಚ್ಚ, ಕಾರ್ಯದರ್ಶಿ ಶ್ರವಣ್ ಕುಮಾರ್, ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Latest 5

Related Posts