ಕಣಿಯೂರು ಗ್ರಾ.ಪಂ. ಬಿಜೆಪಿ ಬೆಂಬಲಿತ ಸದಸ್ಯೆ ಕಾಂಗ್ರೆಸ್‌ಗೆ ಸೇರ್ಪಡೆ

ಕಣಿಯೂರು ಗ್ರಾ.ಪಂ. ಬಿಜೆಪಿ ಬೆಂಬಲಿತ ಸದಸ್ಯೆ ಕಾಂಗ್ರೆಸ್‌ಗೆ ಸೇರ್ಪಡೆ
Facebook
Twitter
LinkedIn
WhatsApp

ಬೆಳ್ತಂಗಡಿ; ಕಣಿಯೂರು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಸದಸ್ಯೆ ಪ್ರಿಯಾಂಕ ರಾಧಾಕೃಷ್ಣ ಗೌಡ ತನ್ನ ವಾರ್ಡ್‌ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅನುದಾನ ಕೊಡಿಸುವುದಾಗಿ ಭರವಸೆ ನೀಡಿ, ನಂತರ ಯಾವುದೇ ಅನುದಾನ ನೀಡದೆ ಕಡೆಗಣಿಸಿರುತ್ತಾರೆ. ಅಲ್ಲದೆ ನಾವು ಗ್ರಾಮದ ಯಾವುದೇ ಕೆಲಸ ಕಾರ್ಯಕ್ಕೂ ನೇರವಾಗಿ ಶಾಸಕರನ್ನು ಸಂಪರ್ಕಿಸಿದರೆ ನಮ್ಮ ಗ್ರಾಮದ ಪ್ರಭಾವಿ ವ್ಯಕ್ತಿಯೊಬ್ಬರು ನಮಗೆ ಗದರಿಸಿ ಏನೇ ಮಾತನಾಡುವುದಿದ್ದರೂ ನನ್ನ ಮೂಲಕವೇ ಮಾತನಾಡಬೇಕು ಎಂದು ಹೇಳುತ್ತಿದ್ದು, ಈ ಎಲ್ಲಾ ಕಾರಣದಿಂದಾಗಿ ನನ್ನ ವಾರ್ಡ್‌ನ ಬಿಜೆಪಿ ಪಕ್ಷದ ಕಾರ್ಯಕರ್ತರ ಪಡೆದು ನಾನು ಬಿಜೆಪಿ ಪಕ್ಷ ತೊರೆದು ಮಾಜಿ ಶಾಸಕರಾದ ಕೆ. ವಸಂತ ಬಂಗೇರ ಮತ್ತು ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ರವರ ನೇತೃತ್ವದಲ್ಲಿ ಕಾಂಗ್ರೇಸ್ ಪಕ್ಷ ಸೇರ್ಪಡೆಯಾಗುತ್ತಿರುವುದಾಗಿ ತಿಳಿಸಿ, ಮೇ 7ರಂದು ಬೆಳ್ತಂಗಡಿ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಉಪಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾದರು.ಇದೇ ವೇಳೆ ಬಿಜೆಪಿ ಕಾರ್ಯಕರ್ತ ವಿಜಯ ನಾಯ್ಕ ಕಣಿಯೂರು ಮತ್ತು ಕಣಿಯೂರು ಬಿಜೆಪಿ ಬೂತ್ ಸಮಿತಿ ಕಾರ್ಯದರ್ಶಿ ರಾಧಾಕೃಷ್ಣ ಗೌಡ ಕೂಡ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಭಗಿರಥ ಜಿ., ತಾಲೂಕು ಪಂಚಾಯತ್ ಮಾಜಿ ಸದಸ್ಯ ಈಶ್ವರ ಭಟ್ ಮಾಯಿಲ್ತೋಡಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷೆ ಲೋಕೇಶ್ವರಿ ವಿನಯಚಂದ್ರ ಗೌಡ, ಪಕ್ಷದ ವಕ್ತಾರರದ ಮನೋಹರ ಕುಮಾರ್ ಇಳಂತಿಲ, ಕಣಿಯೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಉಮವತಿ ದೇಜಪ್ಪ ಗೌಡ, ಉಜಿರೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ವಿನುತ ರಜತ ಗೌಡ, ಲಾಯಿಲ ಗ್ರಾಮ ಪಂಚಾಯತ್ ಸದಸ್ಯೆ ರೇವತಿ, ಕಣಿಯೂರು ಗ್ರಾಮ ಪಂಚಾಯತ್ ಸದಸ್ಯೆ ಸುಮತಿ ಶೆಟ್ಟಿ, ಪಕ್ಷದ ಪ್ರಮುಖರಾದ ಸತೀಶ್ ಪದ್ಮುಂಜ, ಕಾಸಿಂ ಪದ್ಮುಂಜ, ಸರೋಜಿನಿ, ಲಿಂಗಪ್ಪ ಬಂಗೇರ, ಚಂದ್ರಕಾಂತ ಮತ್ತಿತರರು ಉಪಸ್ಥಿತರಿದ್ದರು

Latest 5

Related Posts