ಅಕ್ರಮ ಗೋಸಾಟ ಪತ್ತೆ

ಅಕ್ರಮ ಗೋಸಾಟ ಪತ್ತೆ
Facebook
Twitter
LinkedIn
WhatsApp

ಬೆಳ್ತಂಗಡಿ: ಕಣಿಯೂರು ಗ್ರಾಮದ ಪದ್ಮುಂಜ ಎಂಬಲ್ಲಿ ಮೇ 11ರ ಮಧ್ಯಾಹ್ನ ಕೆಎ 21 ಬಿ 8892 ನಂಬರಿನ ಪಿಕ್‌ಅಪ್ ವಾಹನದಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದುದನ್ನು ಪತ್ತೆಹಚ್ಚಿದ ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ವಿ. ಭರತ್ ಕುಮಾರ್ ಮತ್ತು ಸಿಬ್ಬಂದಿಗಳು; ಪಿಕ್‌ಅಪ್ ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ ವಾಹನದಲ್ಲಿ ಮೂರು ಜಾನುವಾರುಗಳನ್ನು ಅಮಾನುಷವಾಗಿ ತುಂಬಿ ಸಾಗಾಟ ಮಾಡುತ್ತಿದ್ದುದು ಪತ್ತೆಯಾಗಿದೆ. ವಾಹನ ಹಾಗೂ ಜಾನುವಾರುಗಳನ್ನು ಮುಟ್ಟುಗೋಲು ಹಾಕಿದ ಉಪ್ಪಿನಂಗಡಿ ಪೊಲೀಸರು ಆರೋಪಿ ವಾಹನ ಚಾಲಕ ಬಂದಾರು ಗ್ರಾಮದ ಮೈರೋಳ್ತಡ್ಕ ನಿವಾಸಿ ರಕ್ಷಿತ್ (25) ಎಂಬಾತನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

Latest News

Related Posts