ಎಸ್‌‌ಡಿಎಂ ಮಹಿಳಾ ಐಟಿಐಗೆ ಅರ್ಜಿ ಅಹ್ವಾನ

ಎಸ್‌‌ಡಿಎಂ ಮಹಿಳಾ ಐಟಿಐಗೆ ಅರ್ಜಿ ಅಹ್ವಾನ
Facebook
Twitter
LinkedIn
WhatsApp

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವತಿಯಿಂದ ನಡೆಸಲ್ಪಡುವ ಹಾಗೂ ರಾಷ್ಟ್ರೀಯ ವೃತ್ತಿ ಶಿಕ್ಷಣ ಪರಿಷತ್ ನವದೆಹಲಿಯಿಂದ ಮಾನ್ಯತೆ ಪಡೆದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐಟಿಐಗೆ 2024-25 ನೇ ಸಾಲಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.ಸಂಸ್ಥೆಯಲ್ಲಿ ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್ ಹಾಗೂ ಫ್ಯಾಷನ್ ಡಿಸೈನ್ ಮತ್ತು ಟೆಕ್ನಾಲಜಿ ಒಂದು ವರ್ಷ ಅವಧಿಯ ಎರಡು ವೃತ್ತಿ ತರಬೇತಿಗಳಿದ್ದು ವರ್ಷದ ಕೊನೆಯಲ್ಲಿ ನಡೆಯುವ ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವೃತ್ತಿ ಪ್ರಮಾಣ ಪತ್ರವನ್ನು ನೀಡಲಾಗುವುದು. ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಉದ್ಯೋಗಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುವುದು; ಜೊತೆಗೆ ವಿದ್ಯಾರ್ಥಿನಿಯರನ್ನು ಆಯ್ದ ಕಂಪೆನಿಗಳಲ್ಲಿ ಅಪ್ರಂಟ್‌ಶಿಪ್ ತರಬೇತಿಗೆ ನಿಯೋಜಿಸಲಾಗುವುದು ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ, ಉಜಿರೆ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08256-236800

Latest 5

Related Posts