ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಮೇ 20ರಂದು ತೋರಣಮುಹೂರ್ತ, ವಿಮಾನಶುದ್ಧಿ, ಆರಾಧನಾಪೂರ್ವಕ ಕ್ಷೇತ್ರಪಾಲ ಪ್ರತಿಷ್ಠೆ, ನವಕಲಶ ಅಭಿಷೇಕ ಮತ್ತು ನಾಂದಿಮಂಗಲ ಪೂಜಾವಿಧಾನ ಮತ್ತಿತರ ಧಾರ್ಮಿಕ ವಿಧಿ-ವಿಧಾನಗಳು ನಡೆದವು.ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ಹೆಗ್ಗಡೆಯವರು ಮತ್ತು ಊರಿನ ಶ್ರಾವಕರು- ಶ್ರಾವಕಿಯರು ಉಪಸ್ಥಿತರಿದ್ದರು.






