ಎಸ್‌ಎಸ್‌ಎಲ್‌ಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್‌ಗೆ ಅಭಿನಂದನೆ.

ಎಸ್‌ಎಸ್‌ಎಲ್‌ಸಿ  ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್‌ಗೆ  ಅಭಿನಂದನೆ.
Facebook
Twitter
LinkedIn
WhatsApp

ಬೆಳ್ತಂಗಡಿ: ಪ್ರಸಕ್ತ ಶೈಕ್ಷಣಿಕ ವರ್ಷ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಹಾಗೂ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಚಿನ್ಮಯ್ ಜಿ.ಕೆ. ಅವರನ್ನು ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ವಿದ್ಯಾರ್ಥಿಯ ನಿವಾಸಕ್ಕೆ ತೆರಳಿ ಅಭಿನಂದಿಸಿ, ಸಮ್ಮಾನಿಸಿದರು. ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ. ಪಾರೆಂಕಿ ಮತ್ತು ಜಯಾನಂದ ಗೌಡ ಹಾಗೂ ವಿದ್ಯಾರ್ಥಿಯ ಪೋಷಕರು ಉಪಸ್ಥಿತರಿದ್ದರು.

Latest News

Related Posts