ಬೆಳ್ತಂಗಡಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಾಲಾಡಿಯಲ್ಲಿ ಮೇ 6ರಂದು 1-8ನೇ ತರಗತಿಯ ಎಲ್ಲಾ ಮಕ್ಕಳಿಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಡಂತ್ಯಾರು ಘಟಕದ ಅಧ್ಯಕ್ಷ ಹಾಜಿ ಲತೀಫ್ ಸಾಹೇಬ್ ಇವರ ಕೊಡುಗೆಯಾದ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಹಕೀಂ ವಹಿಸಿದ್ದರು. ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಪುಷ್ಪಾಲತಾ, ಸದಸ್ಯರುಗಳಾದ ಸವಿತಾ, ಅಬುಸಾ, ಶೋಭಾ, ಮುಖ್ಯ ಶಿಕ್ಷಕಿ ಲತಾ ಕೆ. ಉಪಸ್ಥಿತರಿದ್ದರು. ಶಾಲಾ ಅಧ್ಯಾಪಕ ವೃಂದದವರು ಸಹಕರಿಸಿದರು.ಶಾಲಾ ವಿದ್ಯಾರ್ಥಿಗಳು ಮೊದಲಿಗೆ ಪ್ರಾರ್ಥಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಜಯರಾಜ್ ಸ್ವಾಗತಿಸಿದರು. ಮುಖ್ಯ ಶಿಕ್ಷಕಿ ಲತಾ ಕೆ. ಕಾರ್ಯಕ್ರಮ ನಿರೂಪಿಸಿ ಕೊನೆಯಲ್ಲಿ ವಂದಿಸಿದರು.






