ರಸ್ತೆ ಮಧ್ಯೆ ಕೆಟ್ಟು ನಿಂತ ಬಸ್: ಸಂಚಾರ ಅಸ್ತವ್ಯಸ್ತ

ರಸ್ತೆ ಮಧ್ಯೆ ಕೆಟ್ಟು ನಿಂತ ಬಸ್: ಸಂಚಾರ ಅಸ್ತವ್ಯಸ್ತ
Facebook
Twitter
LinkedIn
WhatsApp

ಬೆಳ್ತಂಗಡಿ: ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಮದ್ದಡ್ಕ ಮಸೀದಿ ಸಮೀಪ ಹದಗೆಟ್ಟ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ಸು ಕೆಟ್ಟು ನಿಂlತು ಸುಮಾರು 2 ಗಂಟ್ಟೆಗಳ ಕಾಲ ವಾಹನ ಸಂಚಾರಕ್ಕೆ ಅಡಚಣೆಯಾಗಿ ಪ್ರಯಾಣಿಕರು ಪರದಾಡಿದ ಘಟನೆ ಅ 5ರಂದು ನಡೆದಿದೆ. ತಕ್ಷಣ ಸ್ಪಂದಿಸಿ ಸುಗಮ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕಾದ ಕೆಎಸ್‌ಆರ್‌ಟಿಸಿ ನಿಗಮದ ಯಾವುದೇ ಅಧಿಕಾರಿಗಳು ಸರಿಯಾದ ಸ್ಪಂದನೆ ನೀಡದೇ ಪ್ರಯಾಣಿಕರು ಪರದಾಡಬೇಕಾಯಿತು. ಕೆಎಸ್‌ಆರ್‌ಟಿಸಿ ಅಧಿಕಾರಿಗಳ ನಿರ್ಲ್ಯಕ್ಷ್ಯದ ಬಗ್ಗೆ ಸಾರ್ವಜನಿಕರು ಅಕ್ರೊಶ ವ್ಯಕ್ತಪಡಿಸಿದ್ದಾರೆ. ಆದರೆ ತಕ್ಷಣ ಸ್ಥಳಕ್ಕಾಗಮಿಸಿದ ಬೆಳ್ತಂಗಡಿ ಸಂಚಾರಿ ಪೋಲಿಸರು ಒತ್ತಡದ ಮಧ್ಯೆಯೂ ವಾಹನ ಸಂಚಾರಕ್ಕೆ ಒಂದಷ್ಟು ಅವಕಾಶ ಮಾಡಿಕೊಟ್ಟರು. ಕ್ರೇನ್ ಮೂಲಕ ಬಸ್ಸನ್ನು ತೆರವು ಮಾಡಲಾಯಿತು. ಇದೇ ವೇಳೆ ಅದೇ ರಸ್ತೆಯಲ್ಲಿ ಗ್ಯಾಸ್ ತುಂಬಿದ ಲಾರಿ ಚಾಲಕ ಅವಸರದಲ್ಲಿ ಬದಿಯಿಂದ ಚಲಿಸುವಾಗ ಲಾರಿ ಮಣ್ಣಲ್ಲಿ ಹೂತು ಹೋದ ಘಟನೆ ನಡೆಯಿತು. ಒಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿಯ ದುರವಸ್ತೆಯಲ್ಲಿ ಪ್ರಯಾಣಿಕರಿಗೆ ನಿತ್ಯ ಗೋಳು ತಪ್ಪಿದ್ದಲ್ಲ.

Latest 5

Related Posts