ಕುಲದೈವೋ ಬ್ರಹ್ಮ’ ನೂತನ ಪ್ರಸಂಗಬಿಡುಗಡೆ

ಕುಲದೈವೋ ಬ್ರಹ್ಮ’ ನೂತನ ಪ್ರಸಂಗಬಿಡುಗಡೆ
Facebook
Twitter
LinkedIn
WhatsApp

‘ ಬೆಳ್ತಂಗಡಿ: ಮೂಡುಬಿದಿರೆಯ ಕನ್ನಡ ಕಲಾಭವನದಲ್ಲಿ ಸೆಪ್ಟೆಂಬರ್ 1ರಂದು ವಿಶ್ವವಿಖ್ಯಾತ ಶ್ರೀ ಕ್ಷೇತ್ರ ಗೆಜ್ಜೆ ಗಿರಿ ಮಹಾತ್ಮೆಯ ಕರ್ತೃ ನಿತಿನ್ ಕುಮಾರ್ ತೆಂಕಕಾರಂದೂರು ಮತ್ತು ಯೋಗೀಶ್ ರಾವ್ ಚಿಗುರುಪಾದೆ ಪದ್ಯ ರಚನೆಯ ‘ಕುಲದೈವೋ ಬ್ರಹ್ಮ’ ಎಂಬ ನೂತನ ಯಕ್ಷಗಾನ ಪ್ರಸಂಗ ಸಾವಿರಾರು ಕಲಾಭಿಮಾನಿಗಳ ಸಮ್ಮುಖದಲ್ಲಿ ಬಿಡುಗಡೆಗೊಂಡಿತು.ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಅಧ್ಯಕ್ಷ ಪೀತಾಂಬರ ಹೆರಾಜೆ ಈ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದು; ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಭುಜಬಲಿ ಜೈನ್, ಜಾನಪದ ವಿದ್ವಾಂಸ ಶೇಖರ್, ಮೂಡಬಿದ್ರೆ ನಗರಸಭೆ ಸದಸ್ಯ ಸುರೇಶ್ ಕೋಟ್ಯಾನ್, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಸುದರ್ಶನ್, ಗೆಜ್ಜೆಗಿರಿ ಕ್ಷೇತ್ರದ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಗುರು ನಾರಾಯಣಸ್ವಾಮಿ ಸೇವಾ ಸಂಘ ಬೆಳ್ತಂಗಡಿಯ ಅಧ್ಯಕ್ಷ ಜಯ ವಿಕ್ರಮ್, ಬಿಲ್ಲವ ಸಂಘ ಮೂಡಬಿದಿರೆಯ ಅಧ್ಯಕ್ಷ ಸುರೇಶ್ ಕೆ. ಪೂಜಾರಿ, ಇರುವೆಯಲು ಬಿಲ್ಲವ ಸಂಘದ ಅಧ್ಯಕ್ಷ ಕುಮಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶೇಖರ ಕುಕ್ಕೆಡಿ, ವೇಣೂರು ಕಂಬಳ ಸಮಿತಿಯ ಅಧ್ಯಕ್ಷ ನಿತೀಶ್, ವಕೀಲರಾದ ನಾಗೇಶ್ ಶೆಟ್ಟಿ ಹಾಗೂ ಇತರ ಗಣ್ಯರು ಈ ಸುಂದರ ಸಮಾರಂಭವನ್ನು ಸಾಕ್ಷೀಕರಿಸಿದರು. ಯಕ್ಷಗಾನಕ್ಕೆ ಶ್ರಮಿಸಿದ ಹಿರಿಯ ಮತ್ತು ಕಿರಿಯ ಕಲಾವಿದರುಗಳನ್ನು ವೇದಿಕೆಯಲ್ಲಿ ಗೌರವಿಸಲಾಯಿತು.

Latest 5

Related Posts