ಬೆಳ್ತಂಗಡಿ: ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವ ನಿಟ್ಟಿನಲ್ಲಿ ಸಹಕಾರ ನೀಡುವಂತೆ ಬೆಳ್ತಂಗಡಿ ವಕೀಲರ ಸಂಘದ ಪದಾಧಿಕಾರಿಗಳು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಹೈಕೋರ್ಟ್ ನ್ಯಾಯವಾದಿ ರಕ್ಷಿತ್ ಶಿವರಾಮ್ರನ್ನು ಬೆಳ್ತಂಗಡಿಯ ಅವರ ಕಛೇರಿಯಲ್ಲಿ ಭೇಟಿ ಮಾಡಿ ಚರ್ಚಿಸಿದರು. ಇದಕ್ಕೆ ಸೂಕ್ತ ರೀತಿಯಲ್ಲಿ ಸ್ಪಂದಿಸಿದ ರಕ್ಷಿತ್ ಶಿವರಾಂ, ಶೀಘ್ರದಲ್ಲಿ ರಾಜ್ಯ ಸರಕಾರದ ಕಾನೂನು ಸಚಿವರು ಮತ್ತು ಲೋಕೋಪಯೋಗಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದಾಗಿ ತಿಳಿಸಿದರು.ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ., ಕೋಶಾಧಿಕಾರಿ ಪ್ರಶಾಂತ್ ಎಮ್., ಜೊತೆ ಕಾರ್ಯದರ್ಶಿ ವಿನಯ ಕುಮಾರ್, ಜಿಲ್ಲಾ ಕೆ.ಡಿ.ಪಿ. ಸದಸ್ಯ ನ್ಯಾಯವಾದಿ ಸಂತೋಷ್ ಕುಮಾರ್ ಮತ್ತು ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್ ಉಪಸ್ಥಿತರಿದ್ದರು.







