ಬೆಳ್ತಂಗಡಿ: ಅಖಿಲ ಭಾರತೀಯ ಸಾಹಿತ್ಯ ಪರಿಷದ್(ರಿ) ಕರ್ನಾಟಕಬೆಳ್ತಂಗಡಿ ತಾಲೂಕು ಸಮಿತಿ ಮತ್ತು ಗಮಕ ಕಲಾ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ಜಂಟಿ ಆಶ್ರಯದಲ್ಲಿ ಸೆಪ್ಟೆಂಬರ್ 9ರಂದು ಉಜಿರೆಯ ಬದನಾಜೆ ಸರಕಾರಿ ಪ್ರೌಢಶಾಲೆಯಲ್ಲಿ ಗಮಕ ಕಾರ್ಯಕ್ರಮ ನಡೆಯಿತು. ಗಮಕ ಕಾರ್ಯಕ್ರಮವನ್ನು ನಿವೃತ್ತ ಪ್ರಾಂಶುಪಾಲರಾದ ಗಮಕ ಕಲಾವಿದ ಚಿಂತಕ, ಸಾಹಿತಿ ಪ್ರೊ. ಗಣಪತಿ ಭಟ್ ಕುಳಮರ್ವ ಮತ್ತು ವ್ಯಾಖ್ಯಾನವನ್ನು ಉಂಡೆಮನೆ ವಿಶ್ವೇಶ್ವರ ಭಟ್ಟರು ಅತ್ಯಂತ ಮನೋಜ್ಞವಾಗಿ ನಡೆಸಿಕೊಟ್ಟರು.ಶಾಲಾ ವಿದ್ಯಾರ್ಥಿಗಳಿಗೆ ಅರ್ಥವಾಗುವಂತೆ ಸರಳ ಭಾಷೆಯಲ್ಲಿ ಕುಮಾರವ್ಯಾಸಭಾರತದ ‘ಕೌರವೇಂದ್ರನ ಕೊಂದೆ ನೀನು’ ಎಂಬ ಕಾವ್ಯಭಾಗವನ್ನು ವಿಶ್ವೇಶ್ವರ ಭಟ್ಟರು ವಾಚಿಸಿ, ಪ್ರೊ. ಗಣಪತಿ ಭಟ್ ಕುಳಮರ್ವ ಅದನ್ನು ಸುಲಲಿತವಾಗಿ ವ್ಯಾಖ್ಯಾನಿಸಿದರು. ಗಮಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸಿಕೊಂಡದ್ದು ಕಾರ್ಯಕ್ರಮದ ಆಕರ್ಷಣೆಯಾಗಿತ್ತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಜಮುನಾ ವಹಿಸಿಕೊಂಡು ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಸಾಹಿತ್ಯ ಸೇವೆಯ ಕಾರ್ಯವನ್ನು ಶ್ಲಾಘಿಸಿದರು. ಶಾಲಾ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಸುಭಾಷಿಣಿ ಪ್ರಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ವಿನುತಾ ರಜತ್ ಗೌಡರವರು ಕಾರ್ಯಕ್ರಮ ನಿರೂಪಿಸಿದರು. ಆಶಾ ಅಡೂರ್ ವಂದಿಸಿದರು. ಶಾಲಾ ಸಿಬ್ಬಂದಿಗಳೊಂದಿಗೆ ಗಮಕ ಕಲಾ ಪರಿಷತ್ತಿನ ಕಾರ್ಯದರ್ಶಿ ಮೇಧಾ ಉಪಸ್ಥಿತರಿ ದ್ದು; ವಿದ್ಯಾರ್ಥಿಗಳಿಗೂ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಪರವಾಗಿ ಪುಸ್ತಕ ಸ್ಮರಣಿಕೆ ನೀಡಲಾಯಿತು.






