ಬೆಳ್ತಂಗಡಿ: ವರದಿ ಸಾಲಿನಲ್ಲಿ ರೂಪಾಯಿ 229.68ಕೋಟಿ ವ್ಯವಹಾರ ನಡೆಸಿದ ನಮ್ಮ ಸಂಘವು 1.3ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದೆ. ಪ್ರಸಕ್ತ ವರ್ಷ ಸದಸ್ಯರಿಗೆ 12% ಡಿವಿಡೆಂಡ್ ನೀಡಲು ಆಡಳಿತ ಮಂಡಳಿ ಸರ್ವಾನುಮತದಿಂದ ತೀರ್ಮಾನಿಸಿದೆ ಎಂದು ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುಧಾಕರ ಭಂಡಾರಿ ತಿಳಿಸಿದರು.ಅವರು ನಾರಾವಿಯ ಧರ್ಮಶ್ರೀ ಸಭಾಭವನದಲ್ಲಿ ನಡೆದ ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸಂಘವು ಒಟ್ಟು ರೂಪಾಯಿ 24.87ಕೋಟಿ ಠೇವಣೆ ಹೊಂದಿದ್ದು, ಸದಸ್ಯರ ಸಹಕಾರದಿಂದ ಲೆಕ್ಕ ಪರಿಶೋಧನೆಯಲ್ಲಿ ನಿರಂತರವಾಗಿ ‘ಎ’ ಗ್ರೇಡ್ ಪಡೆಯುತ್ತಿದೆ ಎಂದು ಸಂತಸವನ್ನು ಹಂಚಿಕೊಂಡರು. ಕಳೆದ 5ವರ್ಷಗಳಲ್ಲಿ ನಿರಂತರವಾಗಿ ನಮ್ಮ ಸದಸ್ಯರು 100% ಸಾಲ ಮರುಪಾವತಿ ಮಾಡಿ ಸಂಘದ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ ಎಂದು ಅಧ್ಯಕ್ಷ ಸುಧಾಕರ ಭಂಡಾರಿ ಸದಸ್ಯರ ಸಹಕಾರವನ್ನು ಕೃತಜ್ಞತೆಯಿಂದ ಸ್ಮರಿಸಿದರು.ದಕ್ಷಿಣ ಕನ್ನಡ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಪೂವಾಜೆ ಕುಶಾಲಪ್ಪ ಗೌಡ, ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್, ಉಪಾಧ್ಯಕ್ಷೆ ಸುಮಿತ್ರಾ, ಸದಸ್ಯರಾದ ರವೀಂದ್ರ ಪೂಜಾರಿ ಬಾಂದೊಟ್ಟು, ಉದಯ ಹೆಗ್ಡೆ, ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಆಡಳಿತ ಮೊಕ್ತೇಸರ ನಿರಂಜನ್ ಅಜ್ರಿ, ಬೆಳ್ತಂಗಡಿ ಟಿಎಪಿಸಿಎಂಎಸ್ ನಿರ್ದೇಶಕ ಮಹಾವೀರ ಅಜ್ರಿ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಶಾಖಾ ವ್ಯವಸ್ಥಾಪಕರಾದ ಮಹೇಶ್ ಜೈನ್ ಹಾಗೂ ಸುಧೀರ್, ಸಂಘದ ಉಪಾಧ್ಯಕ್ಷ ಸದಾನಂದ ಗೌಡ, ಆಡಳಿತ ಮಂಡಳಿಯ ಸದಸ್ಯರಾದ ಜಗದೀಶ್ ಹೆಗ್ಡೆ, ವಿಠಲ ಪೂಜಾರಿ, ಸುಜಲತಾ ಎಸ್., ರಾಜೇಂದ್ರ ಕುಮಾರ್, ಯಶೋಧಾ, ಲಕ್ಷ್ಮಣ ಪೂಜಾರಿ, ಪೆರ್ನ, ಲಿಂಗಪ್ಪ ಮಲೆಕುಡಿಯ, ಹರೀಶ್ ಹೆಗ್ಡೆ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರತಿನಿಧಿ ಸಿರಾಜುದ್ದೀನ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.ಮಹಾಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಕುಶಾಲಪ್ಪ ಗೌಡರನ್ನು ಅಭಿನಂದಿಸಿ ಸಮ್ಮಾನಿಸಲಾಯಿತು. ಮೆಸ್ಕಾಂ ಇಲಾಖೆಯ ಲೈನ್‌ಮ್ಯಾನ್‌ಗಳಾದ ನಾರಾಯಣ, ಅಜಯ್, ಮೋಹನ್, ಅಮೋಗ್‌ರ ಸೇವೆಯನ್ನು ಗುರುತಿಸಿ ಗೌರವಿಸಲಾಯಿತು. ಕೃಷಿ ಕ್ಷೇತ್ರದ ಸಾಧನೆಗಾಗಿ ಮಹಾವೀರ ಜೈನ್, ರಾಜು ದೇವಾಡಿಗ, ಚಂದ್ರಶೇಖರ್, ಪ್ರಭಾಕರ್, ಜಿನ್ನಪ್ಪ ಪೂಜಾರಿ, ಜಯ ಮೂಲ್ಯ, ಜಾನಕಿ, ರಾಜೇಶ್, ಪದ್ಮಶ್ರೀ ಯವರನ್ನು ಗುರುತಿಸಿ ಸಮ್ಮಾನಿಸಲಾಯಿತು. ಸಂಘದ ಮಾದರಿ ಗ್ರಾಹಕರಾದ ಶಶಿಕಾಂತ್ ಮತ್ತು ಅಶೋಕ್; ಸ್ವಚ್ಛತಾ ಪ್ರತಿನಿಧಿ ವಿಜಯ ಅವರನ್ನು ಸ್ಮರಣಿಕೆ ನೀಡಿ ಗುರುತಿಸಲಾಯಿತು. ಕಳೆದ ಶೈಕ್ಷಣಿಕ ವರ್ಷ ನಡೆದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಿಸಲಾಯಿತು.ಮಹಾಸಭೆಯಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ನಾಗರಿಕರಿಗೆ ಉಪಯುಕ್ತವಾದ ಇಲಾಖಾ ಮಾಹಿತಿ ನೀಡಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಕಾಂತ್ ಜೈನ್ ನಿರೂಪಿಸಿ, ಸ್ವಾಗತಿಸಿದ ಕಾರ್ಯಕ್ರಮದಲ್ಲಿ ಲೆಕ್ಕಿಗರಾದ ವನಿತಾ ಸಂಘದ ವಾರ್ಷಿಕ ವರದಿಯನ್ನು ಮಹಾಸಭೆಯ ಮುಂದಿರಿಸಿ, ಅನುಮೋದನೆ ಪಡೆದರು. ಉಪಾಧ್ಯಕ್ಷ ಸದಾನಂದ ಗೌಡ ಕೊನೆಯಲ್ಲಿ ವಂದಿಸಿದರು.






