ಮಹಿಳಾ ದೌರ್ಜನ್ಯಗಳ ಕಠಿಣ ಕ್ರಮಕ್ಕೆ ಆಗ್ರಹ

ಮಹಿಳಾ ದೌರ್ಜನ್ಯಗಳ ಕಠಿಣ ಕ್ರಮಕ್ಕೆ ಆಗ್ರಹ
Facebook
Twitter
LinkedIn
WhatsApp

ಬೆಳ್ತಂಗಡಿ: ಇತ್ತೀಚೆಗೆ ರಾಜ್ಯ ಮತ್ತು ಜಿಲ್ಲೆಯ ಹಲವಾರು ಕಡೆಗಳಲ್ಲಿ ನಡೆಯುತ್ತಿರುವ ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲಿನ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯ ಖಂಡಿಸಿ ತಪ್ಪಿದಸ್ಥರಿಗೆ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ತಪ್ಪಿತಸ್ಥರಿಗೆ ಶಾಶ್ವತವಾಗಿ ಜಾಮೀನು ನಿರಾಕರಿಸಬೇಕು ಹಾಗೂ ವಿಧವಾ ವೇತನ ಹೆಚ್ಚಿನಬೇಕು…. ಮುಂತಾದ ಬೇಡಿಕೆಗಳಿಗೆ ಆಗ್ರಹಿಸಿ ಬೆಳ್ತಂಗಡಿಯ ಸ್ನೇಹ ಕಿರಣ್ ಮಹಿಳಾ ಒಕ್ಕೂಟದ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಸೆಪ್ಟೆಂಬರ್ 12ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರಿಗೆ, ಪೋಲಿಸ್ ಕಮಿಷನರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.

Latest 5

Related Posts