ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ
Facebook
Twitter
LinkedIn
WhatsApp

: ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಕ್ಲಬ್, ಬೆಂಗಳೂರು ಇಂದಿರಾನಗರ ರೋಟರಿ ಕ್ಲಬ್ ಮತ್ತು ರೋಟರಿ ಸೇವಾ ಟ್ರಸ್ಟ್‌ನ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ 258 ವಿದ್ಯಾರ್ಥಿಗಳಿಗೆ ರೂಪಾಯಿ 10.32 ಲಕ್ಷ ಮೊತ್ತದ ವಿದ್ಯಾರ್ಥಿ ವೇತನವನ್ನು ಸೆಪ್ಟೆಂಬರ್ 14ರಂದು ಬೆಳ್ತಂಗಡಿ ರೋಟರಿ ಸಭಾಭವನದಲ್ಲಿ ವಿತರಿಸಲಾಯಿತು. ತಾಲೂಕಿನ ಸರಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕಲಿಯುತ್ತಿರುವ ಶೇ 85ಕ್ಕಿಂತ ಅಧಿಕ ಅಂಕ ಪಡೆದ, ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರಣ್ ವರ್ಮ ವಹಿಸಿದ್ದು, ರೋಟರಿ ಕ್ಲಬ್ ಬೆಂಗಳೂರು ಇಂದಿರಾನಗರ ಅಧ್ಯಕ್ಷೆ ಸುಪ್ರಿಯಾ ಖಾಂದಾರಿ, ಕಾರ್ಯದರ್ಶಿ ನರಸಿಂಹನ್ ಕಣ್ಣನ್, ರೋಟರಿ ಜಿಲ್ಲಾ ಕಾರ್ಯದರ್ಶಿ ರಿತೇಶ್ ಬಾಳಿಗಾ, ಸಹಾಯಕ ಗವರ್ನರ್ ಮಹಮ್ಮದ್ ವಳವೂರು, ಮಾಜಿ ಕಾರ್ಯದರ್ಶಿ ಸುರೇಶ್, ಇಂದಿರಾನಗರ ರೋಟರಿ ಕ್ಲಬ್ ವಿದ್ಯಾರ್ಥಿ ವೇತನ ಸಮಿತಿಯ ಸಂಚಾಲಕ ರಾಜ ಕೌರ, ಜಗದೀಶ್ ಮುಗುಳಿ, ಶ್ರೀಧರ ಪಡುವೆಟ್ಣಾಯ, ರೋಟರಿ ವಲಯ ಸೇನಾನಿ ಮನೋರಮಾ ಭಟ್, ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶಕುಮಾರ್ ರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬೆಳ್ತಂಗಡಿ ರೋಟರಿ ಕ್ಲಬ್ ಮಾಜಿ ಅಧ್ಯಕ್ಷ, ನ್ಯಾಯವಾದಿ ಬಿ.ಕೆ. ಧನಂಜಯ ರಾವ್ ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿದರು. ಬೆಂಗಳೂರು ಇಂದಿರಾನಗರ ರೋಟರಿ ಕ್ಲಬ್ ಮತ್ತು ಬೆಳ್ತಂಗಡಿ ರೋಟರಿ ಕ್ಲಬ್ ಪದಾಧಿಕಾರಿಗಳು, ಸದಸ್ಯರು ಹಾಗೂ ಫಲಾನುಭವಿ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಹಾಗೂ ಮಕ್ಕಳ ಹೆತ್ತವರು ಭಾಗವಹಿಸಿದ್ದರು.

Latest 5

Related Posts