ಶಿಕ್ಷಕರ ದಿನಾಚರಣೆ

ಶಿಕ್ಷಕರ ದಿನಾಚರಣೆ
Facebook
Twitter
LinkedIn
WhatsApp

ಬೆಳ್ತಂಗಡಿ: ವೇಣೂರು ಸಮೀಪದ ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸೆಪ್ಟೆಂಬರ್ 13ರಂದು ಆಚರಿಸಲಾಯಿತು. 10ನೇ ತರಗತಿಯ ವಿದ್ಯಾರ್ಥಿಗಳು ಶಿಕ್ಷಕರಿಗೆ ಗುರುವಂದನೆಯನ್ನು ಮಾಡಿದರು. ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳು ಕವನಗಳ ಮೂಲಕ ಶಿಕ್ಷಕರ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿಗಳು ಶಿಕ್ಷಕರಿಗೆ ವಿಭಿನ್ನ ರೀತಿಯ ಸ್ಪರ್ಧೆಗಳನ್ನು ನಡೆಸಿ ವಿಜೇತರಿಗೆ ಬಹುಮಾನವನ್ನು ವಿತರಿಸಿದರು.ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ.ಎಚ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ; ಇದು ನಿಮ್ಮ ಜೀವನಕ್ಕೆ ಅಡಿಪಾಯ, ಇನ್ನು ಮುಂದಕ್ಕೂ ನಿಮ್ಮ ಜೀವನ ಉಜ್ವಲವಾಗಲಿ ಎಂದು ಮಕ್ಕಳಿಗೆ ಶುಭ ಹಾರೈಸಿದರು. ಶಾಲಾ ಸಂಚಾಲಕ ಅಶ್ವಿತ್ ಕುಲಾಲ್ ಮಸತನಾಡಿ; ವಿದ್ಯಾರ್ಥಿಗಳೇ ಉತ್ತಮ ಅಂಕಗಳನ್ನು ಪಡೆದು ನಿಮ್ಮ ಜೀವನವನ್ನು ರೂಪಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಓಮನ, ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಅಕ್ಷತಾ, ಕಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಪವಿತ್ರ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಹತ್ತನೇ ತರಗತಿಯ ವಿದ್ಯಾರ್ಥಿ ವರ್ಷಿತ ಮತ್ತು ದ್ವಿತೀಯ ಪಿಯುಸಿಯ ಸಿಂಚನ ಮತ್ತು ಸಮೀಕ್ಷಾ ನಿರೂಪಿಸಿದರು. 10ನೇ ತರಗತಿಯ ವಿದ್ಯಾರ್ಥಿಗಳು ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಈ ಕಾರ್ಯಕ್ರಮವು ಆಯೋಜಿಸಿದರು. ಕೊನೆಯದಾಗಿ ಸಿಹಿ ತಿಂಡಿಯನ್ನು ವಿತರಿಸಲಾಯಿತು.

Latest 5

Related Posts