ಬೆಳ್ತಂಗಡಿಯ ಶ್ರೀ ಗುರುದೇವ ವಿವಿಧೋದ್ದೇಶ ಸೊಸೈಟಿಯ ಬೆಳುವಾಯಿ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಬೃಹತ್ ವೈದ್ಯಕೀಯ ಶಿಬಿರ

ಬೆಳ್ತಂಗಡಿಯ ಶ್ರೀ ಗುರುದೇವ ವಿವಿಧೋದ್ದೇಶ ಸೊಸೈಟಿಯ ಬೆಳುವಾಯಿ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಬೃಹತ್ ವೈದ್ಯಕೀಯ ಶಿಬಿರ
Facebook
Twitter
LinkedIn
WhatsApp

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಇದರ ಬೆಳುವಾಯಿ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಕೆ.ಎಮ್.ಸಿ. ಆಸ್ಪತ್ರೆ ಅತ್ತಾವರ ಮಂಗಳೂರು ಮತ್ತು ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್‌ನ ವತಿಯಿಂದ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ ಬೆಳುವಾಯಿ, ಯುವವಾಹಿನಿ (ರಿ) ಮೂಡಬಿದ್ರೆ ಘಟಕ ಹಾಗೂ ಅಂಗಡಿ ಮನೆ ಕಮಲಮ್ಮ ಕಾಂಪ್ಲೆಕ್ಸ್ ಹೋಮಲ್ಕೆ ಬೆಳುವಾಯಿ ಇವರ ಸಂಯುಕ್ತ ಸಹಯೋಗದಲ್ಲಿ ಸೆಪ್ಟೆಂಬರ್ 16ರಂದು ಅಂಗಡಿ ಮನೆ ಕಮಲಮ್ಮ ಕಾಂಪ್ಲೆಕ್ಸ್ ಹೋಮಲ್ಕೆ ಬೆಳುವಾಯಿಯಲ್ಲಿ ಉಚಿತ ವೈದ್ಯಕೀಯ ಶಿಬಿರವು ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷರಾಗಿ ಸಂಘದ ನಿರ್ದೇಶಕರಾದ ಜಗದೀಶ್ಚಂದ್ರ ಡಿ.ಕೆ. ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಭಾಸ್ಕರ್ ಎಸ್. ಕೋಟ್ಯಾನ್ ಶಿಬಿರವನ್ನು ಉದ್ಘಾಟಿಸಿದರು. ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಬಗ್ಗೆ ಪ್ರಾಸ್ತಾವಿಕವಾಗಿ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಶ್ವಥ್ ಕುಮಾರ್ ಮಾತನಾಡಿದರು. ಸುಮಾರು 230ಕ್ಕೂ ಮಿಕ್ಕಿ ಶಿಬಿರಾರ್ಥಿಗಳು ಈ ಶಿಬಿರದ ಸದುಪಯೋಗವನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ ಬೆಳುವಾಯಿ ಇದರ ಅಧ್ಯಕ್ಷ ರಾಜೇಶ್ ಸುವರ್ಣ ಎಮ್., ಯುವವಾಹಿನಿ(ರಿ) ಮೂಡಬಿದ್ರೆ ಘಟಕದ ಅಧ್ಯಕ್ಷ ಶಂಕರ್ ಎ. ಕೋಟ್ಯಾನ್, ಬೆಳುವಾಯಿ ಗ್ರಾಮ ಪಂಚಾಯತ್ ಸದಸ್ಯ ನಾರಾಯಣ ಅಮೀನ್, ಕಮಲಮ್ಮ ಕಾಂಪ್ಲೆಕ್ಸ್ ಮಾಲಕ ಚಂದ್ರಶೇಖರ ವೇದಿಕೆಯಲ್ಲಿ ಉಪಸ್ಥಿತರಿದ್ದರು . ಸಂಘದ ಬಜಗೋಳಿ ಶಾಖಾ ವ್ಯವಸ್ಥಾಪಕ ಪ್ರವೀಣ್ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ಸಂಘದ ನಿರ್ದೇಶಕರಾದ ಧರಣೇಂದ್ರ ಕುಮಾರ್ ವಂದಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಕಚೇರಿ ಹಿರಿಯ ವ್ಯವಸ್ಥಾಪಕ ಕೀರ್ತನ್ ಕುಮಾರ್, ಬೆಳುವಾಯಿ ಶಾಖಾ ವ್ಯವಸ್ಥಾಪಕ ಉಮೇಶ್ ಪೂಜಾರಿ, ಹಾಗೂ ಇತರ ಶಾಖೆಗಳ ಶಾಖಾ ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Latest 5

Related Posts