ಕನ್ಯಾಡಿ ಸರ್ಕಾರಿ ಶಾಲೆಗೆ ಸ್ಮಾರ್ಟ್ ಕ್ಲಾಸ್ ಹಸ್ತಾಂತರ

ಕನ್ಯಾಡಿ ಸರ್ಕಾರಿ ಶಾಲೆಗೆ ಸ್ಮಾರ್ಟ್ ಕ್ಲಾಸ್ ಹಸ್ತಾಂತರ
Facebook
Twitter
LinkedIn
WhatsApp

ಬೆಳ್ತಂಗಡಿ : ಹಿಂದೂ ಧಾರ್ಮಿಕ ಸೇವಾ ಸಮಿತಿ ಆಶ್ರಯದಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಬೆಂಗಳೂರಿನ ಬಿಟ್ಸ್ & ಬೈಟ್ ಐಟಿ ಕಂಪನಿಯ ಪ್ರಕಾಶ್ ರಾವ್ ನೀಡಿದ ಒಂದು ಲಕ್ಷ ಅರವತ್ತೈದು ಸಾವಿರ ರೂಪಾಯಿ ವೆಚ್ಚದ ಸ್ಮಾರ್ಟ್ ಕ್ಲಾಸ್‌ನ್ನು ಶ್ರೀ ರಾಮಕ್ಷೇತ್ರ ದ ಸದ್ಗುರು ಬ್ರಹ್ಮಾನಂದ ಸರಸ್ವತಿ ಶ್ರೀಗಳು ಕನ್ಯಾಡಿಯ ಸರಕಾರಿ ಶಾಲೆಗೆ ಹಸ್ತಾಂತರ ಮಾಡಿ ಸ್ಮಾರ್ಟ್ ಕ್ಲಾಸ್‌ನ ಸದುಪಯೋಗವನ್ನು ಚೆನ್ನಾಗಿ ಪಡೆದು ಸರಕಾರಿ ಶಾಲೆಯಲ್ಲಿ ಕಲಿಯುವ ಮಕ್ಕಳ ಭವಿಷ್ಯ ಉಜ್ವಲವಾಗಿ ಬೆಳಗಲಿ ಎಂದು ಆಶೀರ್ವದಿಸಿದರು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿಯ ಅಧ್ಯಕ್ಷ ಪೂರಣ್ ವರ್ಮಾ, ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಅವಿನಾಶ್ ಶೆಟ್ಟಿ, ಹಿಂದೂ ಧಾರ್ಮಿಕ ಸೇವಾ ಸಮಿತಿಯ ಅಧ್ಯಕ್ಷ ರಾಜೇಶ್ ರಾವ್, ಇಸ್ರೋ ಹಿರಿಯ ವಿಜ್ಞಾನಿ ವಾಸುದೇವ್ ರಾವ್ ಪಿ., ಅಗ್ರಿ ಲೀಫ್ ಸಂಸ್ಥೆಯ ನಿರ್ದೇಶಕ ಅವಿನಾಶ್ ರಾವ್, ಶಿವಪ್ರಸಾದ್ ಸುರ್ಯ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ನಂದ ಭಟ್ ಕೆ., ಶಾಲಾ ಮುಖ್ಯ ಶಿಕ್ಷಕಿ ಪುಷ್ಪಾ ಎನ್. ಹಾಗೂ ಶಾಲಾ ಅಧ್ಯಾಪಕ ವೃಂದ ಮತ್ತು ಶಾಲೆಯ ಹಿರಿಯ ವಿದ್ಯಾರ್ಥಿಗಳು, ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

Latest 5

Related Posts