ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪರಿಶಿಷ್ಟ ವರ್ಗದದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ (ಲ್ಯಾಂಪ್) ಇದರ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 20ರಂದು ಸಂಘದ ಅಧ್ಯಕ್ಷ ಲಿಂಗಪ್ಪ ನಾಯ್ಕ ಉರುವಾಲು ಇವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತಿ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರಗಳನ್ನು ಮಹಾಸಭೆಯ ಮುಂದಿರಿಸಿ, ಅನುಮೋದನೆ ಪಡೆದರು. ಪ್ರಸಕ್ತ ಶೈಕ್ಷಣಿಕ ವರ್ಷ ನಡೆದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಕೃಷಿ ಕೇತ್ರದಲ್ಲಿ ವಿಶೇಷ ಸಾಧನೆಗೈದ ಕೇಶವ ಎಂ.ಕೆ.ಯವರನ್ನು ಕರ್ಮಯೋಗಿ ಪ್ರಶಸ್ತಿ ನೀಡಿ ಸಮ್ಮಾನಿಸಿ, ಗೌರವಿಸಲಾಯಿತು.ಈ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಉಪಾಧ್ಯಕ್ಷ ಸಂತೋಷ್ ನಾಯ್ಕ, ನಿರ್ದೇಶಕರುಗಳಾದ, ಪ್ರಸಾದ್ ನಾಯ್ಕ, ಪ್ರಶಾಂತ ನಾಯ್ಕ, ತಾರನಾಥ, ಲೀಲಾವತಿ, ಸವಿತಾ ಹಾಗೂ ಸಂಘದ ಸಿಬ್ಬಂದಿ ವರ್ಗ, ಪಿಗ್ಗಿ ಸಂಗ್ರಾಹಗಾರರು ಹಾಗೂ ಸಂಘದ ಸದಸ್ಯರು ಹಾಜರಿದ್ದರು. ನಿರ್ದೇಶಕ ಸೀತಾರಾಮ್ ಬಿ. ಎಸ್. ಬೆಳಾಲು ಸ್ವಾಗತಿಸಿದರು. ಚಿದಾನಂದ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕ ಚೆನ್ನಕೇಶವ ವಂದಿಸಿದರು.






