ಬೆಳ್ತಂಗಡಿ: ಡಿಕೆಆರ್ಡಿಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಸೆಪ್ಟೆಂಬರ್ 28ರಂದು ಹೆಚ್ಐವಿ/ಏಡ್ಸ್ ಸೋಂಕಿತ ಹಾಗೂ ಬಾಧಿತ ವ್ಯಕ್ತಿಗಳ ಮಾಸಿಕ ಬೆಂಬಲ ಸಭೆ ಮತ್ತು ಮಾಹಿತಿ ಕಾರ್ಯಕ್ರಮವು ಬೆಳ್ತಂಗಡಿಸಾಂತೋಮ್ ಟವರ್ ನಲ್ಲಿ ನಡೆಯಿತು.ತೆರಿಗೆ ಸಲಹೆಗಾರ ಬೆಳ್ತಂಗಡಿಯ ಸಿನು ಅಬ್ರಹಾಂ ಸಭೆಯಲ್ಲಿ ಭಾಗವಹಿಸಿ ಮಾತನಾಡಿ; ಜೀವನದಲ್ಲಿ ಯಾವುದೇ ಸಮಸ್ಯೆಯನ್ನು ಧೈರ್ಯದಿಂದ ಎದುರಿಸುವಾಗ ಯಶಸ್ಸನ್ನುಗಳಿಸಲು ಸಾಧ್ಯ ಎಂದರಲ್ಲದೇ, ಫಲಾನುಭವಿಗಳಿಗೆ ಪೌಷ್ಟಿಕ ಆಹಾರದ ಕಿಟ್ ವಿತರಿಸಿದರು.ಬಂಗಾಡಿ ಮರಿಯಂಬಿಕ ಚರ್ಚ್ನ ಮಾತೃವೇದಿ ಘಟಕದ ಅಧ್ಯಕ್ಷರಾದ ಆನಿಮೋಲ್ ಹಾಗೂ ಘಟಕದ ಪದಾಧಿಕಾರಿಗಳ ನೇತೃತ್ವದಲ್ಲಿ ಪೌಷ್ಟಿಕ ಆಹಾರದ ಕಿಟ್ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ರೂಪಾಯಿ 10,000/- ವನ್ನು ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮಕ್ಕೆ ನೀಡಿದರು.ಹರಿಣಾಕ್ಷಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಿಕೆಆರ್ಡಿಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಬಿನೋಯಿ ಎ.ಜೆ.; ಬಡವ ಬಲ್ಲಿದ ಭೇದ ಭಾವ ವಿಲ್ಲದೆ ಎಲ್ಲರನ್ನೂ ಸಮಾನವಾಗಿ ಕಾಣುವ ಗಡಿಯಾರದ ಶೈಲಿಯು ನಮ್ಮದಾಗ ಬೇಕು ಎಂದು ಪ್ರಾಸ್ತವಿಕವಾಗಿ ಮಾತನಾಡಿದರು. ನವ ಜೀವನ ಬೆಂಬಲ ಕಾರ್ಯಕ್ರಮದ ಸದಸ್ಯೆ ಶಾರದಾ ಪ್ರಾರ್ಥಿಸಿದರು. ಡಿಕೆಆರ್ಡಿಎಸ್ ಸಂಸ್ಥೆಯ ಸಂಯೋಜಕಿ ಶ್ರೇಯಾ ಸ್ವಾಗತಿಸಿದರು. ನವ ಜೀವನ ಆರೈಕೆ ಮತ್ತು ಬೆಂಬಲ ಕಾರ್ಯಕ್ರಮದ ಸದಸ್ಯೆ ಶಶಿಕಲ ವಂದಿಸಿದರು.ಕಾರ್ಯಕರ್ತ ಮಾರ್ಕ್ ಡಿ’ಸೋಜ ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾತು.






