ಅಂತರ್ ಜಿಲ್ಲಾ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ

ಅಂತರ್ ಜಿಲ್ಲಾ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ
Facebook
Twitter
LinkedIn
WhatsApp

ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಆಶ್ರಯದಲ್ಲಿ ನಡೆದ ಅಂತರ್ ಜಿಲ್ಲಾ ಮಟ್ಟದ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟದ ಸಮಾರೋಪ ಸಮಾರಂಭವು ಅಕ್ಟೋಬರ್ 1ರಂದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಿತು.ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಎಸ್.ಸತೀಶ್ಚಂದ್ರ ಮತ್ತು ಬೆಳ್ತಂಗಡಿ ನ್ಯಾಯವಾದಿ ಶಶಿಕಿರಣ್ ಜೈನ್ ವಿಜೇತ ತಂಡಗಳಿಗೆ ಪ್ರಶಸ್ತಿ ವಿತರಿಸಿದರು. ಕಾಲೇಜಿನ ಪ್ರಾಂಶುಪಾಲ ಸಂತೋಷ್ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಎಚ್., ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ಪೋರ್ಟ್ಸ್ ಕ್ಲಬ್ ಕಬಡ್ಡಿ ತರಬೇತುದಾರ ಕೃಷ್ಣಾನಂದ ರಾವ್, ಕಾಲೇಜಿನ ವ್ಯವಸ್ಥಾಪಕ ಚಂದ್ರನಾಥ್ ಜೈನ್ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ನಿತಿನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಪಂದ್ಯಾಟದಲ್ಲಿ ಒಟ್ಟು 12 ಪೊಲಿಟೆಕ್ನಿಕ್ ಕಾಲೇಜುಗಳ ತಂಡಗಳು ಭಾಗವಹಿಸಿದ್ದವು. ಪ್ರಥಮ ಸ್ಥಾನವನ್ನು ಆತಿಥೇಯ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ತಂಡ, ದ್ವಿತೀಯ ಸ್ಥಾನವನ್ನು ಸುಳ್ಯ ಕೆ.ವಿ.ಜಿ. ಪಾಲಿಟೆಕ್ನಿಕ್ ಕಾಲೇಜು ತಂಡ ಪಡೆಯಿತು‌. ವೈಯಕ್ತಿಕ ವಿಭಾಗದಲ್ಲಿ ಉತ್ತಮ ದಾಳಿಗಾರನಾಗಿ ಸುಳ್ಯ ಕೆ.ವಿ.ಜಿ. ಪೊಲಿಟೆಕ್ನಿಕ್‌ನ ಆಕಾಶ್, ಉತ್ತಮ ಹಿಡಿತಗಾರನಾಗಿ ಸುಳ್ಯ ಕೆ.ವಿ.ಜಿ. ಪೊಲಿಟೆಕ್ನಿಕ್‌ನ ಜಿಯಾದ್, ಉತ್ತಮ ಸವ್ಯಸಾಚಿ ಆಟಗಾರನಾಗಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪೊಲಿಟೆಕ್ನಿಕ್‌ನ ನಿರಂಜನ್ ಪ್ರಶಸ್ತಿ ಪಡೆದುಕೊಂಡಿರುತ್ತಾರೆ. ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪೊಲಿಟೆಕ್ನಿಕ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದ ಉಪನ್ಯಾಸಕ ಸಂಪತ್ ಕುಮಾರ್ ಜೈನ್ ಕಾರ್ಯಕ್ರಮ ನಿರೂಪಿಸಿದರು.

Latest 5

Related Posts