ಬೆಳ್ತಂಗಡಿ: ಇತ್ತೀಚೆಗೆ ನಡೆದ ಬೆಳ್ತಂಗಡಿ ಲಯನ್ಸ್ ಕ್ಲಬ್‌ಗೆ ಲಯನ್ಸ್ ಪ್ರಾಂತ್ಯ ಮತ್ತು ವಲಯಾಧ್ಯಕ್ಷರ ಅಧಿಕೃತ ಭೇಟಿ ಕಾರ್ಯಕ್ರಮದ ಸಂದರ್ಭದಲ್ಲಿ ಲಯನ್ಸ್ ಸಂಸ್ಥೆಯ ‘ಸೇವೆಯನ್ನು ಅಪ್ಪಿಕೊಳ್ಳಿ” ಎಂಬ ಧ್ಯೇಯೋದ್ಧೇಶದಂತೆ ಕಾಪಿನಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಕಂಪ್ಯೂಟರ್ ಉಪಕರಣಗಳನ್ನು ಕೊಡುಗೆಯಾಗಿ ಹಸ್ತಾಂತರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಅನಿತಾ ಕಂಪ್ಯೂಟರ್ ಸ್ವೀಕರಿಸಿ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಲಯನ್ಸ್ ಪ್ರಾಂತ್ಯಧ್ಯಕ್ಷ ವೆಂಕಟೇಶ್ ಹೆಬ್ಬಾರ್, ಪ್ರತಿಭಾ ಹೆಬ್ಬಾರ್, ವಲಯಾಧ್ಯಕ್ಷ ಉಮೇಶ್ ಶೆಟ್ಟಿ ಉಜಿರೆ, ರೋಷನ್ ಮುಚ್ಚೂರ್, ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ, ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ವಿವಿಧ ಕ್ಲಬ್ಬಿನ ಅಧ್ಯಕ್ಷರುಗಳು ಉಪಸ್ಥಿತರಿದ್ದರು. ಕೋಶಾಧಿಕಾರಿ ಆಮಿತಾನಂದ ಹೆಗ್ಡೆ ವಂದಿಸಿದರು.






