ಬೆಳ್ತಂಗಡಿ: ಧಾರ್ಮಿಕ ಶ್ರದ್ಧಾಕೇಂದ್ರಗಳಾದ ದೇವಸ್ಥಾನ ಹಾಗೂ ಮಂದಿರಗಳಲ್ಲಿ ನಡೆಯುವ ಧಾರ್ಮಿಕ ಆಚರಣೆಗಳಲ್ಲಿ ನಾವು ನಮ್ಮ ಮಕ್ಕಳೊಂದಿಗೆ ಬಾಗವಹಿಸುವುದರ ಮೂಲಕ ಮಕ್ಕಳಿಗೆ ಧಾರ್ಮಿಕ ಚಿಂತನೆ ಸಂಸ್ಕಾರವನ್ನು ಕಲಿಸುವುದರೊಂದಿಗೆ ಸದ್ರಢ ರಾಷ್ಠ್ರ ನಿರ್ಮಾಣ ಮಾಡೋಣ ಎಂದು ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮಿಜಿ ಹೇಳಿದರು. ಅವರು ಅಕ್ಟೋಬರ್ 9ರಂದು ಓಡಿಲ್ನಾಳ ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ವತಿಯಿಂದ ನಡೆದ 2ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಕಾರ್ಯಕ್ರಮದ ಪ್ರಯುಕ್ತ ಆಯೋಜಿಸಲಾದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡುತ್ತಿದ್ದರು.ಬಾರ್ಕೂರಿನ ವಾಗ್ಮಿ ಎನ್.ಆರ್. ದಾಮೋದರ್ ಶರ್ಮ ಧಾರ್ಮಿಕ ಉಪನ್ಯಾಸ ನೀಡಿದರು ವೇದಿಕೆಯಲ್ಲಿ ಶಾರದೋತ್ಸವ ಸಮಿತಿ ಗೌರವಾಧ್ಯಕ್ಷ ರಾಮಣ್ಣ ಕುಲಾಲ್ ಕೋಲಾಜೆ, ಅಧ್ಯಕ್ಷ ನಿತೇಶ್ ಕೆ. ಓಡಿಲ್ನಾಳ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು, ಕಾರ್ಯದರ್ಶಿ ಸುದೀಪ್ ಶೆಟ್ಟಿ ಮೂಡೈಲು, ಮಹಿಳಾ ಸಮಿತಿ ಅಧ್ಯಕ್ಷೆ ಬಾರತಿ ಸುರೇಶ್ ಶೆಟ್ಟಿ, ಭಜನಾ ಸಮಿತಿ ಅಧ್ಯಕ್ಷ ಯೋಗಿಶ್ ಅಡ್ಡಕೊಡಂಗೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಜ್ಞಾ ಓಡಿಲ್ನಾಳ ಕಾರ್ಯಕ್ರಮ ನಿರೂಪಿಸಿದರು. ಸುದೀಪ್ ಸ್ವಾಗತಿಸಿ. ಭಾರತಿ ಸುರೇಶ್ ಶೆಟ್ಟಿ ವಂದಿಸಿದರು.ಅಕ್ಟೋಬರ್ 8ರಂದು ದೇವಸ್ಥಾನದ ಪ್ರಧಾನ ಅರ್ಚಕ ಪ್ರಸನ್ನ ಭಟ್‌ರವರ ಪೌರೋಹಿತ್ಯದಲ್ಲಿ ಬೆಳಿಗ್ಗೆ ಗಣಹೋಮ, ಕಿರಾತ ಮೂರ್ತಿ ದೇವರೀಗೆ ರುದ್ರಾಭಿಷೇಕ, ಮಹಾಪೂಜೆ ನಡೆಯಿತು. ರಾತ್ರಿ ದುರ್ಗಾ ನಮಸ್ಕಾರ ಪೂಜೆ ಜರಗಿತು. ಸಾಂಸ್ಕ್ರತಿಕ ಕಾರ್ಯಕ್ರಮದಂಗವಾಗಿ ಕಲ್ಲಡ್ಕದ ವಿಠಲ ನಾಯಕ್ ಮತ್ತು ಬಳಗದವರಂದ ತುಳು ಗೀತ- ಸಾಹಿತ್ಯ- ಸಂಭ್ರಮ ನಡೆಯಿತು. ಅಕ್ಟೋಬರ್ 9ರಂದು ದೇವತಾ ಪ್ರಾರ್ಥನೆಯೊಂದಿಗೆ ಶಾರದೆ ದೇವಿಯ ವಿಗ್ರಹ ಪ್ರತಿಷ್ಠಾಪನೆ ನಡೆಯಿತು. ಬಳಿಕ ವಿಶೇಷವಾಗಿ ದುರ್ಗಾಂಭ ಭಜನಾ ಮಂಡಳಿ ಬಂಟ್ವಾಳ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಮಹಾ ಪೂಜೆ ಪ್ರಸಾದ ವಿತರಣೆಯ ಬಳಿಕ ಸಾರ್ವಜನಿಕ ಅನ್ನ ಸಂತರ್ಪಣೆ ಜರಗಿತು.






