ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌‌ನ ಅಧ್ಯಕ್ಷರಿಗೆ ಅಭಿನಂದನೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌‌ನ ಅಧ್ಯಕ್ಷರಿಗೆ ಅಭಿನಂದನೆ
Facebook
Twitter
LinkedIn
WhatsApp

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಧರ್ಮಸ್ಥಳ ಇದರ ಅಧ್ಯಕ್ಷರಾಗಿ ಆಯ್ಕೆಯಾದ ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ಇವರಿಗೆ ಬೆಳ್ತಂಗಡಿ ಮತ್ತು ಗುರುವಾಯನಕೆರೆ ತಾಲೂಕಿನ ಭಜನಾ ಪರಿಷತ್ ವತಿಯಿಂದ ಅಭಿನಂದನೆಸಲಾಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಭಜನಾ ಪರಿಷತ್ತಿನ ಅಧ್ಯಕ್ಷ ವೆಂಕಟೇಶ್ವರ ಭಟ್ ಕಜೆ, ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ,ಗುರುವಾಯನಕೆರೆಯ ಯೋಜನಾಧಿಕಾರಿ ದಯಾನಂದ, ಭಜನಾ ಪರಿಷತ್ತಿನ ಸಮನ್ವಯಾಧಿಕಾರಿ ರಾಘವೇಂದ್ರ ಹಾಗೂ ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ತಿನ ಸದಸ್ಯರು ಹಾಗೂ ತಾಲೂಕಿನ ಭಜನಾ ಮಂಡಳಿಯ ಅಧ್ಯಕ್ಷರು ಮತ್ತು ಮುಖ್ಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Latest 5

Related Posts