ಬೆಳ್ತಂಗಡಿ: ಧರ್ಮಸ್ಥಳದ ಕನ್ಯಾಡಿಯ ಯಕ್ಷ ಭಾರತಿ ಸಂಸ್ಥೆಯ ದಶಮಾನೋತ್ಸವದ ಪ್ರಯುಕ್ತ ತುಳು ಶಿವಳ್ಳಿ ಸಭಾ ಬೆಳ್ತಂಗಡಿ ಆಶ್ರಯದಲ್ಲಿ ಕಕ್ಕಿಂಜೆಯ ಶ್ರೀ ಕೃಷ್ಣ ಆಸ್ಪತ್ರೆ, ಮಂಗಳೂರಿನ ಯೆನಪೋಯ ಮೆಡಿಕಲ್ ಕಾಲೇಜ್ ಆಸ್ಪತ್ರೆ ಮತ್ತು ಜುಲೈಕಾ ಕ್ಯಾನ್ಸರ್ ಆಸ್ಪತ್ರೆ ದೇರಳಕಟ್ಟೆಯ ಸಹಕಾರದಲ್ಲಿ ಉಚಿತ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣಾ ಶಿಬಿರವು ಅಕ್ಟೋಬರ್ 13ರಂದು ಕನ್ಯಾಡಿಯ ಹರಿಹರಾನುಗ್ರಹ ಕಲ್ಯಾಣ ಮಂಟಪದಲ್ಲಿ ಜರಗಿತು.ಉಜಿರೆಯ ಕನಸಿನ ಮನೆ ‘ಲಕ್ಷ್ಮಿ ಗ್ರೂಪ್’ ಮಾಲಕ ಹಾಗೂ ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್. ಕೆ. ಶಿಬಿರವನ್ನು ಉದ್ಘಾಟಿಸಿ ಮಾತನಾಡಿ; ಯಕ್ಷಗಾನ ಹಾಗೂ ಸಂಸ್ಕಾರ ಶಿಕ್ಷಣದ ಜೊತೆಗೆ ಆರೋಗ್ಯ ಸೇವೆಯ ಸಾಮಾಜಿಕ ಕಳಕಳಿಯನ್ನು ಯಕ್ಷ ಭಾರತಿ ಸಂಸ್ಥೆ ಹೊಂದಿ ನಿರಂತರ ಸಮಾಜಸೇವೆಯಲ್ಲಿ ತೊಡಗಿಸಿಕೊಂಡು ಬರುತ್ತಿರುವುದು ಅಭಿನಂದನೀಯ ಎಂದರು.ಡಾ| ಅಶ್ವಿನಿ ಶೆಟ್ಟಿ ಯೆನಪೋಯ ಮೆಡಿಕಲ್ ಕಾಲೇಜ್ ಆಸ್ಪತ್ರೆ ದೇರಳಕಟ್ಟೆ, ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯ ಡಾ| ಮುರಳಿಕೃಷ್ಣ ಇರ್ವತ್ರಾಯ, ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲಾ, ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ ಶೆಟ್ಟಿ, ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ. ಮಹೇಶ್ ಕುಮಾರ್ ಶೆಟ್ಟಿ, ಧರ್ಮಸ್ಥಳ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರೀತಮ್ ಡಿ., ಮುಂಡಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಜನಾರ್ದನ ಗೌಡ, ಉಜಿರೆ ಶ್ರೀ ಜನಾರ್ದನ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಅಧ್ಯಕ್ಷ ಗಂಗಾಧರ್ ರಾವ್ ಎಸ್. ಕೆವುಡೇಲು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭಹಾರೈಸಿದರು.ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಯಕ್ಷ ಭಾರತಿ ಅಧ್ಯಕ್ಷ ರಾಘವೇಂದ್ರ ಬೈಪಾಡಿತ್ತಾಯ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶ್ರೀನಿವಾಸ ರಾವ್ ಕಲ್ಮಂಜ ಪ್ರಾರ್ಥಿಸಿದರು. ದಶಮಾನೋತ್ಸವ ಸಮಿತಿಯ ಕಾರ್ಯದರ್ಶಿ ವಿದ್ಯಾ ಕುಮಾರ್ ಕಾಂಚೋಡು ಸ್ವಾಗತಿಸಿ, ಸಹ ಕಾರ್ಯದರ್ಶಿ ಗೀತಾ ಕುರ್ಮಾಣಿ ವಂದಿಸಿದರು. ಮುರಳಿ ಕೃಷ್ಣ ಆಚಾರ್ ಕಾರ್ಯಕ್ರಮ ನಿರೂಪಿಸಿದರು. ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್, ಯಕ್ಷ ಭಾರತಿ ಪದಾಧಿಕಾರಿಗಳಾದ ಹರೀಶ್ ರಾವ್, ಯಂ. ಹರಿದಾಸ ಗಾಂಭೀರ ಧರ್ಮಸ್ಥಳ, ಮಹೇಶ ಕನ್ಯಾಡಿ, ಕುಸುಮಾಕರ ಕುತ್ತೋಡಿ, ಶಿತಿಕಂಠ ಭಟ್, ಭವ್ಯ ಹೊಳ್ಳ, ಸೂರ್ಯಾನಂದ ರಾವ್, ಸುದರ್ಶನ್ ಕೆ. ವಿ., ಮುರಳಿಧರ ದಾಸ್, ಡಿ. ಕೃಷ್ಣ ಕನ್ಯಾಡಿ, ಕೌಸ್ತುಭ, ಕೌಶಿಕ ರಾವ್ ಕನ್ಯಾಡಿ, ಯಶೋಧರ ಇಂದ್ರ, ಶಶಿಧರ ಕನ್ಯಾಡಿ ಉಪಸ್ಥಿತರಿದ್ದು ಶಿಬಿರದ ಸಂಯೋಜನೆಗೆ ಸಹಕರಿಸಿದರು.11 ಆರೋಗ್ಯ ಸೇವಾ ವಿಭಾಗಗಳಲ್ಲಿ ತಜ್ಞ ವೈದ್ಯರು ಉಪಸ್ಥಿತರಿದ್ದು 150ಕ್ಕಿಂತಲೂ ಹೆಚ್ಚು ಫಲಾನುಭವಿಗಳು ಶಿಬಿರದಲ್ಲಿ ತಪಾಸಣೆಗೊಳಪಟ್ಟು ಚಿಕಿತ್ಸೆಯ ಮಾಹಿತಿ ಪಡೆದರು.