ಬೆಳ್ತಂಗಡಿ: ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಂಘ ಹಾಗೂ ರಿಯಲ್ ಎಸ್ಟೇಟ್ ಗ್ರೂಪ್ ಜಂಟಿ ಸಹಯೋಗದಲ್ಲಿ ನವೆಂಬರ್ 17ರಂದು ನಡೆದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಮಟ್ಟದ ಅಂತರ್ ಐಟಿಐ ಶಿಕ್ಷಣ ಸಂಸ್ಥೆಗಳ ವಾಲಿಬಾಲ್ ಮತ್ತು ತ್ರೋಬಾಲ್ ಪಂದ್ಯಾವಳಿಯ ತ್ರೋಬಾಲ್ ಪಂದ್ಯದಲ್ಲಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐಟಿಐ ಪ್ರಥಮ ಸ್ಥಾನ ಗಳಿಸಿದೆ.ಪಂದ್ಯದಲ್ಲಿ ನಾಲ್ಕು ಕೈಗಾರಿಕಾ ತರಬೇತಿ ಸಂಸ್ಥೆಗಳ (ಐಟಿಐ) ವಿದ್ಯಾರ್ಥಿನಿಯರು ಭಾಗವಹಿಸಿದ್ದು, ವಾಮಂಜೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಂಗಳಜ್ಯೋತಿ ಐಟಿಐ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿದೆ.ಪ್ರಥಮ ಸ್ಥಾನ ವಿಜೇತ ತಂಡಕ್ಕೆ ಟ್ರೋಫಿಯೊಂದಿಗೆ 3,000 ರೂಪಾಯಿ ನಗದು ಬಹುಮಾನ ಲಭಿಸಿದ್ದು, ಲಾವಣ್ಯಾ ‘ಉತ್ತಮ ಎಸೆತಗಾರ್ತಿ’ ಹಾಗೂ ಮಂಜುಳಾ ‘ಆಲ್ ರೌಂಡರ್’ ಪ್ರಶಸ್ತಿ ಪಡೆದಿದ್ದಾರೆ. ವಿಜೇತ ಎಲ್ಲವಿದ್ಯಾರ್ಥಿನಿಯರನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಶನಲ್ ಸೊಸೈಟಿಯ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆ, ಡಾ. ಹೇಮಾವತಿ ವೀ. ಹೆಗ್ಗಡೆ, ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಮತ್ತು ಡಾ. ಸತೀಶ್ಚಂದ್ರ ಎಸ್., ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ರಮೇಶ್, ಕಾಲೇಜಿನ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಹಾಗೂ ಅಧ್ಯಾಪಕ ವೃಂದದವರು ಅಭಿನಂದಿಸಿದ್ದಾರೆ.