ಬೆಳ್ತಂಗಡಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರ ಅಧಿಸೂಚನೆಯಂತೆ ರಾಜ್ಯದ ಎಲ್ಲ ಮೊರಾರ್ಜಿ ದೇಸಾಯಿ, ಇಂದಿರಾ ಗಾಂಧಿ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ನಾರಾಯಣ ಗುರು ವಸತಿ ಶಾಲೆಗಳ 6ನೇ ತರಗತಿಯ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಹಾಗೂ ವಿಶೇಷ ವರ್ಗದ ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ಧೇಶದಿಂದ ಸ್ಥಾಪಿಸಿದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಬರುವ ಈ ವಸತಿ ಶಾಲೆಗಳ ಪ್ರವೇಶಕ್ಕಾಗಿ ಅರ್ಜಿಯನ್ನು ಜನವರಿ 25ರ ಒಳಗಾಗಿ ವಿದ್ಯಾರ್ಥಿಯ ವಾಸಸ್ಥಳದ ತಾಲೂಕಿನ ಯಾವುದಾದರೂ ಸಮೀಪದ ವಸತಿ ಶಾಲೆಯಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಬೆಳ್ತಂಗಡಿ ತಾಲೂಕಿನ ಆಸಕ್ತ ವಿದ್ಯಾರ್ಥಿಗಳ ಪೋಷಕರು ಯಾ ಹೆತ್ತವರು ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮುಂಡಾಜೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ (9242217114), ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಚ್ಚಿನ (9741360212), ಇಂದಿರಾ ಗಾಂಧಿ ವಸತಿ ಶಾಲೆ ಹೊಸಂಗಡಿ (9743335673) ಯನ್ನು ಸಂಪರ್ಕಿಸಬಹುದು ಎಂದು ಮುಂಡಾಜೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.