ಬೆಳ್ತಂಗಡಿ: ಮಾರ್ಚ್ 30ರ ಯುಗಾದಿ ಸಡಗರಕ್ಕೆ ವಿಶೇಷ ಮೆರುಗನ್ನು ನೀಡಿದ ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಕೂಟವನ್ನು ಗಣೇಶ್ ನಾರಾಯಣ ಪಂಡಿತ ರವರು ಉದ್ಘಾಟಿಸಿ ಶುಭ ಹಾರೈಸಿದರು, ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಗೌರವಾಧ್ಯಕ್ಷರಾದ ರಕ್ಷಿತ್ ಶಿವರಾಮ್ ಅಧ್ಯಕ್ಷರಾದ ನಿತೀಶ್ ಕೋಟ್ಯಾನ್ ಕಾರ್ಯಧ್ಯಕ್ಷರಾದ ಶೇಖರ್ ಕುಕ್ಕೆಡಿ, ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸತೀಶ್ ಕೆ. ಬಂಗೇರ, ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ದಕ್ಷಿಣ ಕನ್ನಡ ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್, ರಾಷ್ಟ್ರಪ್ರಶಸ್ತಿ ಪುರಸ್ಕೃತ ವಿಶ್ರಾಂತ ಶಿಕ್ಷಕ ಪ್ರಭಾಕರ ಹೆಗ್ಡೆ ಹಟ್ಟಾಜೆಗುತ್ತು, ಪದ್ಮಾಂಬ ಕ್ಯಾಟರರ್ಸ್‌ನ ಮಾಲಕರಾದ ನಾಗ ಕುಮಾರ್ ಜೈನ್, ಹಾಗೂ ಕಂಬಳ ಸಮಿತಿಯ ಪದಾಧಿಕಾರಿಗಳು ಮತ್ತು ಕಂಬಳದ ಅಭಿಮಾನಿಗಳು ಉಪಸ್ಥಿತರಿದ್ದರು.