ಬೆಳ್ತಂಗಡಿ: ಎಪ್ರಿಲ್ 23ರಂದು ಗೇರುಕಟ್ಟೆಯ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ವಸಂತ ಮಜಲುರವರ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಆಡಳಿತ ಮಂಡಳಿಯ ಸಭೆಯಲ್ಲಿ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪ್ರಸಿದ್ಧ ಪ್ರವಾಸಿತಾಣ ಪಹಲ್ಗಾಮ್ನಲ್ಲಿ ಎಪ್ರಿಲ್ 22ರಂದು ನಡೆದ ಪಾಕ್ ಪ್ರಾಯೋಜಿತ ಭಯೋತ್ಪಾದಕ ದಾಳಿಯಲ್ಲಿ ಹತರಾದ 26 ಪ್ರವಾಸಿಗರ ಆತ್ಮಕ್ಕೆ ಚಿರಶಾಂತಿ ಕೋರಿ ಒಂದು ನಿಮಿಷದ ಮೌನ ಪ್ರಾರ್ಥನೆ ಮಾಡಲಾಯಿತು. ಈ ದುರ್ಘಟನೆಯನ್ನು ಉಗ್ರವಾಗಿ ಖಂಡಿಸಿರುವ ಆಡಳಿತ ಮಂಡಳಿ, ಉಗ್ರರಿಗೆ ತಕ್ಕ ಶಾಸ್ತಿ ಮಾಡಲು ಕೇಂದ್ರ ಸರಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದೆ. ಸಭೆಯಲ್ಲಿ ಸಂಘದ ಉಪಾಧ್ಯಕ್ಷ ರಾಜ್ಪ್ರಕಾಶ್ ಶೆಟ್ಟಿ, ಆಡಳಿತ ಮಂಡಳಿಯ ಸದಸ್ಯರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಪಸ್ಥಿತರಿದ್ದರು.