ಬೆಳ್ತಂಗಡಿ: ಬದ್ಯಾರ್ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಆಟೋರಿಕ್ಷಾವೊಂದು ಮಗುಚಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದ ಆಟೋ ಚಾಲಕ ಮೃತಪಟ್ಟ ಘಟನೆ ಜೂನ್ 22ರಂದು ವರದಿಯಾಗಿದೆ.ಮೃತಪಟ್ಟ ಆಟೋ ಚಾಲಕ ಬೆಳ್ತಂಗಡಿ ತಾಲೂಕಿನ ಮಾಲಾಡಿ ನಿವಾಸಿ ಶಿವಾನಂದ ಪಿ. ಮಾಳವ (33) ಎಂದು ಗುರುತಿಸಲಾಗಿದೆ.ಗುರುವಾಯನಕೆರೆಯಿಂದ ಅಳದಂಗಡಿ ಗೆ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಕೂಡಲೇ ಗಂಭೀರವಾಗಿ ಗಾಯಗೊಂಡ ರಿಕ್ಷಾ ಚಾಲಕನನ್ನು ಸ್ಥಳೀಯರ ಸಹಕಾರದೊಂದಿಗೆ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ದರೂ ಆ ವೇಳೆಗೆ ಮೃತ ಪಟ್ಟಿದ್ದ ಎನ್ನಲಾಗಿದೆ. ಆಟೋದಲ್ಲಿದ್ದ ಶಿವರಾಜ್ ಎಂಬವರು ಗಾಯಗೊಂಡಿದ್ದು ಆವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.