ಪುರಾಣ ವಾಚನ-ಪ್ರವಚನ ಎಂಬುದು ಜ್ಞಾನಯಜ್ಞ’

ಪುರಾಣ ವಾಚನ-ಪ್ರವಚನ  ಎಂಬುದು ಜ್ಞಾನಯಜ್ಞ’
Facebook
Twitter
LinkedIn
WhatsApp

‘ಬೆಳ್ತಂಗಡಿ: ಪುರಾಣ ಅಂದರೆ ಭಗವಂತನ ಕಥೆ. ಪುರಾಣ ವಾಚನ-ಪ್ರವಚನ ಎಂಬುದು ಜ್ಞಾನ ಯಜ್ಞ ಹಾಗೂ ಜ್ಞಾನ ಸತ್ರವಾಗಿದ್ದು ಆಸಕ್ತಿ ಮತ್ತು ತನ್ಮಯತೆಯೊಂದಿಗೆ ಶ್ರದ್ಧಾ-ಭಕ್ತಿಯಿಂದ ಪುರಾಣ ವಾಚನ-ಪ್ರವಚನ ಶ್ರವಣದಿಂದ ಪ್ರತಿಯೊಬ್ಬರ ಮನದಲ್ಲೂ, ಮನೆಯಲ್ಲೂ ಸುಖ-ಶಾಂತಿ-ನೆಮ್ಮದಿ ನೆಲೆಸಿ ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗುತ್ತದೆ ಎಂದು ನಿವೃತ್ತ ಉಪನ್ಯಾಸಕ ಡಾ. ಶಾಂತರಾಮ ಪ್ರಭು ನಿಟ್ಟೂರು ಹೇಳಿದರು.ಅವರು ಜುಲೈ 16ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ 54ನೇ ವರ್ಷದ ಪುರಾಣ ವಾಚನ-ಪ್ರವಚನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.ಮಹಾಭಾರತ ಕಥೆ ಕೇಳಿ ಕುಷ್ಠ ರೋಗ ನಿವಾರಣೆಯಾಗಿದೆ ಎಂದು ಪುರಾಣದಿಂದ ತಿಳಿದು ಬಂದಿದೆ. ಪುರಾಣ ವಾಚನ-ಪ್ರವಚನವನ್ನು ಶ್ರದ್ಧಾ-ಭಕ್ತಿಯಿಂದ ಆಲಿಸುವ ಸತ್ಸಂಗದಿಂದ ಪರಸ್ಪರ ಪ್ರೀತಿ-ವಿಶ್ವಾಸ, ಭ್ರಾತೃತ್ವ, ದಯೆ, ಅನುಕಂಪ ಮೊದಲಾದ ಮಾನವೀಯ ಮೌಲ್ಯಗಳು ಉದ್ದೀಪನಗೊಂಡು ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.ಅಧ್ಯಕ್ಷತೆ ವಹಿಸಿದ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಮಾತನಾಡಿ; ಓದುವ ಹವ್ಯಾಸದಿಂದ ನಮ್ಮ ಜ್ಞಾನಕ್ಷಿತಿಜ ವಿಸ್ತಾರವಾಗುತ್ತದೆ. ಊರಿನವರು ಹಾಗೂ ಧರ್ಮಸ್ಥಳಕ್ಕೆ ಬರುವ ಭಕ್ತರು ಕೂಡಾ ಪುರಾಣ ವಾಚನ-ಪ್ರವಚನದ ಸದುಪಯೋಗ ಪಡೆದು ಆದರ್ಶ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದರು.ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.ದೇವಳದ ಪಾರುಪತ್ಯಗಾರರಾದ ಲಕ್ಷ್ಮೀನಾರಾಯಣ ರಾವ್, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ, ಲೆಕ್ಕಪತ್ರ ವಿಭಾಗದ ಮುಖ್ಯಸ್ಥರಾದ ಪುರಂದರ ಭಟ್, ಉದಯಕುಮಾರ್ ಜೈನ್, ಚಂದ್ರಕಾಂತ್, ಮಹಾವೀರ ಅಜ್ರಿ, ಸಂತೋಷ್, ಭುಜಬಲಿ ಧರ್ಮಸ್ಥಳ ಮತ್ತಿತರರು ಉಪಸ್ಥಿತರಿದ್ದರು.ಹವ್ಯಾಸಿ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾರ್ಯಕ್ರಮ ನಿರ್ವಹಿಸಿದ ಶಿಕ್ಷಕ ನಿಶಾಂತ್ ಧನ್ಯವಾದವಿತ್ತರು.ಕುಮಾರವ್ಯಾಸ ವಿರಚಿತ ‘ಕರ್ಣಾಟ ಭಾರತ ಕಥಾಮಂಜರಿ’ ಬಗ್ಗೆ ಗಣಪತಿ ಪದ್ಯಾಣ ವಾಚನಕಾರರಾಗಿ ಹಾಗೂ ಉಜಿರೆ ಅಶೋಕ ಭಟ್ ಪ್ರವಚನಕಾರರಾಗಿ ಸಹಕರಿಸಿದರು.ಸೆಪ್ಟೆಂಬರ್ 16ರವರೆಗೆ ಎರಡು ತಿಂಗಳು ಪ್ರತಿದಿನ ಸಂಜೆ ಗಂಟೆ 6-30 ರಿಂದ ರಾತ್ರಿ 8-00ಗಂಟೆಯವರೆಗೆ ಪುರಾಣ ವಾಚನ-ಪ್ರವಚನ ನಡೆಯಲಿದೆ.

Latest 5

Related Posts