ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಮಹಾ ಸಭೆ

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಮಹಾ ಸಭೆ
Facebook
Twitter
LinkedIn
WhatsApp

ಬೆಳ್ತಂಗಡಿ: ಬೆಳ್ತಂಗಡಿಯ ಕರ್ನಾಟಕ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಆಗಸ್ಟ್ 24ರಂದು ಬೆಳ್ತಂಗಡಿಯ ಸುವರ್ಣ ಆರ್ಕೇಡ್‌ನಲ್ಲಿ ನಡೆಯಿತು.ಸಂಘದ ಅಧ್ಯಕ್ಷರಾದ ಡಾ. ಕೆ. ಜಯಕೀರ್ತಿ ಜೈನ್ ಮಹಸಸಭೆಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ವತ್ಸಲಾ ಜ್ಯೋತಿರಾಜ್ ಸಂಘದ ಗತವರ್ಷದ ವರದಿಯನ್ನು ಸಭೆಗೆ ಮಂಡಿಸಿ 2025-26 ನೇ ಸಾಲಿನ ಬಜೆಟ್ ಮಂಡಿಸಿದರು. ಕ್ಲಪ್ತ ಸಮಯದಲ್ಲಿ ದಂಡನೆ ಬಡ್ಡಿ ಇಲ್ಲದೆ ಸಾಲ ಮರುಪಾವತಿ ಮಾಡಿದ ಗ್ರಾಹಕರನ್ನು ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು. ಕಳೆದ ಶೈಕ್ಷಣಿಕ ವರ್ಷ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 584 (ಶೇಕಡಾ 90%) ಅಂಕ ಪಡೆದ ಬೆಳ್ತಂಗಡಿ ಪೊಲೀಸ್ ಠಾಣಾ ಸಹಾಯಕ ಸಬ್ ಇನ್ಸ್‌ಪೆಕ್ಟರ್ ದುರ್ಗಾದಾಸ್ ಇವರ ಪುತ್ರಿ ಸಂಜನಾ ಎಂ.ಡಿ. ಇವರಿಗೆ ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು.ಪ್ರಸಕ್ತ ವರ್ಷ ಸರಕಾರಿ ಸೇವೆಯಿಂದ ನಿವೃತ್ತರಾದ ಸಂಘದ ನಿರ್ದೇಶಕರಾದ ಅಬ್ದುಲ್ ರಜಾಕ್ ಆರೋಗ್ಯ ಇಲಾಖೆ ಹಾಗೂ ರತ್ನಾವತಿ ಸಿಡಿಪಿಒ ಇಲಾಖೆ ಇವರನ್ನು ಗೌರವಿಸಲಾಯಿತು.ಕಳೆದ ಆರ್ಥಿಕ ವರ್ಷದಲ್ಲಿ ಸಂಘವು ಗಳಿಸಿದ ಲಾಭಾಂಶದಲ್ಲಿ ಸದಸ್ಯರಿಗೆ ಶೇಕಡಾ 20 ರಷ್ಟು ಲಾಭಾಂಶವನ್ನು ಅಧ್ಯಕ್ಷರು ಘೋಷಿಸಿದರು.ಸಂಘದಲ್ಲಿ ಸಾಲ ಮೊತ್ತ ವಸೂಲಿಗಾಗಿ ನಿರ್ಮಲ್ ಕುಮಾರ್ ನಾರಾವಿ ಎಂಬುವವರನ್ನು ನೇಮಿಸಿದ್ದು ಅವರು ಸಂಘದ ನಿಬಂಧನೆಗೆ ಸರಿಯಾಗಿ ಕರ್ತವ್ಯ ನಿರ್ವಹಿಸದೆ ಇದ್ದುದರಿಂದ ಅವರನ್ನು ಸದ್ರಿ ಹುದ್ದೆಯಿಂದ ಮುಕ್ತ ಗೊಳಿಸಿದ್ದು ಅವರು ಇದೀಗ ಸಂಘದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದು ಈ ಬಗ್ಗೆ ಸಂಘದ ಗ್ರಾಹಕರು ಎಚ್ಚರಿಕೆಯಿಂದಿರಬೇಕೆಂದು ಅಧ್ಯಕ್ಷರು ವಿನಂತಿಸಿದರು.ಸಂಘದ ಉಪಾಧ್ಯಕ್ಷರಾದ ಚಿದಾನಂದ ಹೂಗಾರ್, ನಿರ್ದೇಶಕರಾದ ಅಬ್ದುಲ್ ರಜಾಕ್, ಚಂದ್ರಶೇಖರ್, ಪರಮೇಶ್, ರತ್ನಾವತಿ, ಆರತಿ., ಪ್ರಶಾಂತ್, ಹರಿಪ್ರಸಾದ್, ವಾರಿಜ ಕೆ. ಉಪಸ್ಥಿತರಿದ್ದರು.ಸಂಘದ ಸಲಹೆಗಾರರಾದ ವಸಂತ್ ಸುವರ್ಣ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಂಘದ ಸಿಬ್ಬಂದಿಗಳಾದ ವಿಶಾಲ, ಧಾಮಿನಿ ಸಹಕರಿಸಿದರು. ಪಿಗ್ಮಿ ಸಂಗ್ರಾಹಕರೆಲ್ಲರು ಉಪಸ್ಥಿತರಿದ್ದು ಸಹಕರಿಸಿದರು.ಇದೇ ಸಂದರ್ಭದಲ್ಲಿ ಸದಸ್ಯರು ಹಾಗೂ ಸಾರ್ವಜನಿಕರ ಉಪಯೋಗಕ್ಕಾಗಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಹಾಗೂ ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮ ನಡೆಯಿತು. ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ನೇತ್ರ ತಜ್ಞರಾದ ಡಾ. ರಮೇಶ್ ಹಾಗೂ ಅವರ ತಂಡ ಶಿಬಿರವನ್ನು ಯಶಸ್ವಿಯಾಗಿ ನಡೆಸಿದರು. ಈ ಶಿಬಿರದಲ್ಲಿ 100ಕ್ಕೂ ಮಿಕ್ಕಿ ಶಿಬಿರಾರ್ಥಿಗಳು ಬಾಗವಹಿಸಿದರು.

Latest 5

Related Posts