ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿತ್ಯಾನಂದ ನಗರ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ನಲ್ಲಿ ಜಗದ್ಗುರು ಶ್ರೀ ಅತ್ಮಾನಂದ ಸರಸ್ವತಿ ಸ್ವಾಮೀಜಿಯವರ ಸ್ಮರಣೆಯೊಂದಿಗೆ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ 66 ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವದ ಮಾರ್ಚ್ 26 ರಂದು ಬೆಳಿಗ್ಗೆ ದತ್ತ ಯಾಗ, ಮಧ್ಯಾಹ್ನ ಆಂಜನೇಯ ದೇವರಿಗೆ ಮತ್ತು ದತ್ತಾತ್ರೇಯ ಗುರುಗಳಿಗೆ ವಿಶೇಷ ಮಹಾ ಪೂಜೆ ನಡೆಯಿತು. ರಾತ್ರಿ ದತ್ತಾತ್ರೇಯ ಮತ್ತು ಆಂಜನೇಯ ದೇವರ ಮೂರ್ತಿ ಬಲಿ ಉತ್ಸವ ಮತ್ತು ಹನುಮಾನ್ ರಥೋತ್ಸವ, ಕಟ್ಟೆ ಪೂಜೆ, ಕೆರೆ ದೀಪೋತ್ಸವ ನಡೆಯಿತು.






