ನೇಣು ಬಿಗಿದುಕೊಂಡು ಸಾವಿಗೆ ಶರಣು

ನೇಣು ಬಿಗಿದುಕೊಂಡು ಸಾವಿಗೆ ಶರಣು
Facebook
Twitter
LinkedIn
WhatsApp

ಬೆಳ್ತಂಗಡಿ: ಯುವಕನೊಬ್ಬ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕಿನ ಲಾಯ್ಲದಿಂದ ವರದಿಯಾಗಿದೆ.ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ಪ್ರಗತಿನಗರ ಕಾಶಿಬೆಟ್ಟು ನಿವಾಸಿ ಲಿಂಗಪ್ಪ ಎಂಬವರ ಪುತ್ರ ಎಲೆಕ್ಟ್ರಿಷಿಯನ್ ವೃತ್ತಿ ಮಾಡುತ್ತಿದ್ದ ಕೇಶವ (34) ಎಂಬಾತ ಎಪ್ರಿಲ್ 26ರಂದು ರಾತ್ರಿ ಮನೆಯಲ್ಲಿ ನೇಣುಬಿಗಿದಕೊಂಡು ಸಾವಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಸಾವಿಗೆ ಶರಣಾಗಲು ಕಾರಣ ತಿಳಿದುಬಂದಿಲ್ಲ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Latest News

Related Posts