ಬೆಳ್ತಂಗಡಿ: ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಮೇ 12ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಸೌಹಾರ್ದಯುತ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಹಿತ ಪ್ರಮುಖರು ಸಚಿವರ ಜೊತೆಗಿದ್ದರು.ಸಚಿವರನ್ನು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಗೌರವಿಸಿದರು.ಬಳಿಕ ದೇವರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸದ ಸಚಿವರು ಭೋಜನದ ಬಳಿಕ ಕೊಕ್ಕಡ ಮೂಲಕ ಸುಬ್ರಹ್ಮಣ್ಯಕ್ಕೆ ಪ್ರಯಾಣಿಸಿದರು.







