9/11 ಸಮಸ್ಯೆಗಳ ಪರಿಹಾರಕ್ಕೆಅಧಿಕಾರಿಗಳೊಂದಿಗೆ ಸಚಿವರ ಸಭೆ

9/11 ಸಮಸ್ಯೆಗಳ ಪರಿಹಾರಕ್ಕೆಅಧಿಕಾರಿಗಳೊಂದಿಗೆ ಸಚಿವರ ಸಭೆ
Facebook
Twitter
LinkedIn
WhatsApp

9/11 ಸಮಸ್ಯೆಗಳ ಪರಿಹಾರಕ್ಕೆಅಧಿಕಾರಿಗಳೊಂದಿಗೆ ಸಚಿವರ ಸಭೆಫೊಟೊ ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಏಕನಿವೇಶನ ಹಾಗೂ 9/11 ಅರ್ಜಿಗಳ ವಿಲೇವಾರಿಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ಹಾಗೂ ವಿಳಂಬದ ಬಗ್ಗೆ; ಟೋಕನ್ ವ್ಯವಸ್ಥೆಯನ್ನು ಸರಿಪಡಿಸುವಂತೆ ಮತ್ತು ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವ ಬಗ್ಗೆ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ರವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮತ್ತು ಪಟ್ಟಣ ಪಂಚಾಯತ್ ಮಾಜಿ ಸದಸ್ಯರಾದ ಜಗದೀಶ್‌ರವರ ದೂರಿನ ಮೇರೆಗೆ ಮಂಗಳೂರಿನಲ್ಲಿ ಉಸ್ತುವಾರಿ ಸಚಿವರು ಸಂಬಂಧಪಟ್ಟ ಅಧಿಕಾರಿಗಳ ಸಭೆಯನ್ನು ಕರೆದು 9/11 ಅರ್ಜಿಗಳ ವಿಲೇವಾರಿಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ಹಾಗೂ ವಿಳಂಬದ ಬಗ್ಗೆ ಹಾಗೂಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಶೀಘ್ರ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಈ ಎಲ್ಲಾ ವಿಚಾರದ ಬಗ್ಗೆ ವಿಸ್ತೃತವಾದ ಚರ್ಚೆಯನ್ನು ನಡೆಸಿ. ಸಚಿವರು ಎಲ್ಲ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದು ಈ ಮಾಹಿತಿಯ ಅನ್ವಯ ಸರಕಾರದ ಮಟ್ಟದಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದರು.ಈ ಸಂದರ್ಭದಲ್ಲಿ ಮೆಸ್ಕಾಂ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು, ನಗರ ಯೋಜನಾಧಿಕಾರಿಗಳು, ಮೂಡ ಕಮಿಷನರ್, ಸರ್ವೆ ಇಲಾಖೆಯ ಅಧಿಕಾರಿಗಳು, ಮೂಡ ಅಧಿಕಾರಿಗಳು, ಬೆಳ್ತಂಗಡಿಯ ತಾಲೂಕು ಪಂಚಾಯತ್‌ನ ಕಾರ್ಯನಿರ್ವಹಣಾಧಿಕಾರಿ, ಬೆಳ್ತಂಗಡಿ ಪಟ್ಟಣ ಪಂಚಾಯತ್‌ಯ ಮುಖ್ಯ ಅಧಿಕಾರಿ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Latest News

Related Posts