ಸರ್ವಿಸ್ ಟೆಂಪೋ ಚಾಲಕ- ಮಾಲಕರಿಗೆ ಆಹಾರದ ಕಿಟ್ ವಿತರಣೆ

Facebook
Twitter
LinkedIn
WhatsApp

ಮಾಸ್ಕ್ ಧರಿಸಿ ವೈಯಕ್ತಿಕ ಅಂತರದ ಬಗ್ಗೆ ಎಚ್ಚರಿಕೆ ವಹಿಸಿದ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕಿನಿಂದ ಊರುಗಳಿಗೆ ಹೋಗುವ ಪ್ರಯಾಣಿಕರನ್ನು ಕರೆದೊಯ್ಯುವ ಟೂರಿಸ್ಟ್ ಟೆಂಪೋ ಚಾಲಕ-ಮಾಲಕರು ಕೊರೊನಾ ಲಾಕ್ ಡೌನ್ ನಿಂದಾಗಿ ಬಾಡಿಗೆ ಮಾಡಲಾಗದೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಟೂರಿಸ್ಟ್ ವಾಹನ ಚಾಲಕ ಮಾಲಕ ಸಂಘದ ಸದಸ್ಯರಿಗೆ ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್
ಆಹಾರದ ಕಿಟ್ ಗಳನ್ನು ವಿತರಿಸಿದರು. ಎಲ್ಲರೂ ಮಾಸ್ಕ್ ಧರಿಸಿ, ವೈಯಕ್ತಿಕ ಅಂತರದ ಬಗ್ಗೆ ಎಚ್ಚರವಹಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಬೆಳ್ತಂಗಡಿ ಸಂತೆಕಟ್ಟೆಯ ಬಳಿಯಿರುವ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಬ್ಯಾಂಕಿನ ವಠಾರದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಶೈಲೇಶ್ ಕುಮಾರ್, ಯೂತ್ ಕಾಂಗ್ರೆಸ್‌ನ ಅಧ್ಯಕ್ಷ ಅಭಿನಂದನ್ ಹರೀಶ್ ಕುಮಾರ್, ಎಸ್ಸಿ ಘಟಕದ ರಾಜ್ಯ ಸಮಿತಿ ಸದಸ್ಯರಾದ ನಾಗರಾಜ್.ಎಸ್ ಲಾಯಿಲ, ಬ್ಲಾಕ್ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷರಾದ
ಬಿ.ಕೆ.ವಸಂತ್ ಬೆಳ್ತಂಗಡಿ ,
ಕಾಂಗ್ರೆಸ್ ಪಕ್ಷದ ಮುಖಂಡರಾದ ಸತೀಶ್ ಶೆಟ್ಟಿ ದೊಡ್ಡಮನೆ,
ಸುರೇಂದ್ರ ಕೋಟ್ಯಾನ್, ಯೂತ್ ಕಾಂಗ್ರೆಸ್ ಸದಸ್ಯರಾದ ಗಣೇಶ್ ಕಣಿಯೂರು ಮುಂತಾದವರು ಉಪಸ್ಥಿತರಿದ್ದರು. ತಮ್ಮ ಮನವಿ ಮೇರೆಗೆ ಟೆಂಪೋ ಚಾಲಕ ಮಾಲಕ ಸಂಘದ ಸದಸ್ಯರೆಲ್ಲರಿಗೂ ಆಹಾರದ ಕಿಟ್ ವಿತರಿಸಿದ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್ ರವರಿಗೆ ಸಂಘದ ಮಾಜಿ ಅಧ್ಯಕ್ಷರಾದ ಧನಂಜಯ (ಧನು)ರವರು ಕೃತಜ್ಞತೆ ಸಲ್ಲಿಸಿದರು.

Latest News

Related Posts