ಪತ್ರಿಕಾ ದಿನಾಚರಣೆ ಉದ್ಘಾಟನೆ

ಪತ್ರಿಕಾ ದಿನಾಚರಣೆ ಉದ್ಘಾಟನೆ
Facebook
Twitter
LinkedIn
WhatsApp

ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಬೆಳ್ತಂಗಡಿಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜುಲೈ 4ರಂದು ನಡೆದ ಪತ್ರಿಕಾ ದಿನಾಚರಣೆಯನ್ನು ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ಉದ್ಘಾಟಿಸಿದರು. ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಪ್ರತಾಪಸಿಂಹ ನಾಯಕ್; ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯದರ್ಶಿ ಭುವನೇಶ್, ತಾಲೂಕು ಸಂಘದ ಅಧ್ಯಕ್ಷ ಅಶ್ರಫ್ ಆಲಿಕುಂಞಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕೊರೋನಾ ಸೋಂಕು ಹರಡುವಿಕೆ ಭೀತಿಯ ನಡುವೆ ನಡೆದ ಈ ಕಾರ್ಯಕ್ರಮದಲ್ಲಿ ಅತಿಥಿಗಳು ಹಾಗೂ ತಾಲೂಕಿನ ಪತ್ರಕರ್ತರೆಲ್ಲರೂ ಮಾಸ್ಕ್ ಧರಿಸಿ, ವೈಯಕ್ತಿಕ ಅಂತರ ಕಾಪಾಡಿಕೊಂಡೇ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Latest News

Related Posts