ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ನಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ. ಇ. ಜಯರಾಮ್ರವರಿಗೆ ಸರಕಾರಕ್ಕೆ ವರದಿ ಮಾಡಿಕೊಳ್ಳುವುದು ಎಂದು ಸೂಚಿಸಿ, ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶಿಸಿದೆ.ಇದರಿಂದ ತೆರವಾದ ಬೆಳ್ತಂಗಡಿ ತಾಲೂಕು ಪಂಚಾಯತ್ನ ಕಾರ್ಯನಿರ್ವಹಣಾಧಿಕಾರಿ ಸ್ಥಾನಕ್ಕೆ ಈ ಹಿಂದೆ ಬೆಳ್ತಂಗಡಿ ತಾಲೂಕು ಪಂಚಾಯತ್ನಲ್ಲಿ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ನಿರ್ದೇಶಕರಾಗಿ, ಒಂದಷ್ಟು ಕಾಲ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿದ್ದು; ಕಾರ್ಯನಿರ್ವಹಣಾಧಿಕಾರಿಯಾಗಿ ಪದೋನ್ನತಿ ಹೊಂದಿ ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ಗೆ ವರ್ಗಾವಣೆಗೊಂಡಿದ್ದ ಕುಸುಮಾಧರ್ರನ್ನು ಸರಕಾರ ಮತ್ತೆ ಬೆಳ್ತಂಗಡಿಗೆ ವರ್ಗಾವಣೆಗೊಳಿಸಿದ್ದು; ಜುಲೈ 29ರಂದು ಬೆಳ್ತಂಗಡಿ ತಾಲೂಕು ಪಂಚಾಯತ್ನಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.







