ಸ್ವಾತಂತ್ರ್ಯವೆಂದರೆ ಸ್ವೇಚ್ಛಾಚಾರವಲ್ಲ; 74ನೇ ಸ್ವಾತಂತ್ರ್ಯೋತ್ಸವದಲ್ಲಿ ತಹಶೀಲ್ದಾರ್ ಮಹೇಶ್

ಸ್ವಾತಂತ್ರ್ಯವೆಂದರೆ ಸ್ವೇಚ್ಛಾಚಾರವಲ್ಲ;                                         74ನೇ ಸ್ವಾತಂತ್ರ್ಯೋತ್ಸವದಲ್ಲಿ ತಹಶೀಲ್ದಾರ್ ಮಹೇಶ್
Facebook
Twitter
LinkedIn
WhatsApp

ಬೆಳ್ತಂಗಡಿ: ಸ್ವಾತಂತ್ರ್ಯವೆಂದರೆ ಸ್ವೇಚ್ಛಾಚಾರವಲ್ಲ. ನಮ್ಮ ಇತಿಮಿತಿಗಳನ್ನು ಅರಿತು ಸಹನೆ ಹಾಗೂ ಸಂಯಮದಿಂದ ಮಾನವೀಯ ಮೌಲ್ಯಗಳನ್ನು ಕಾಪಾಡಿಕೊಂಡು ಬದುಕು ರೂಪಿಸಿಕೊಳ್ಳುವುದೇ ನಿಜವಾದ ಸ್ವಾತಂತ್ರ್ಯ ಎಂದು ಬೆಳ್ತಂಗಡಿಯ ತಹಶೀಲ್ದಾರ್ ಮಹೇಶ್ ಜೆ. ಹೇಳಿದರು.
ಅವರು ಆಗಸ್ಟ್ 15ರಂದು ಬೆಳ್ತಂಗಡಿಯ ಮಿನಿ ವಿಧಾನಸೌಧದ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ನಡೆದ ರಾಷ್ಟ್ರದ 74ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಸ್ವಾತಂತ್ರ್ಯ ದಿನದ ಸಂದೇಶ ನೀಡುತ್ತಿದ್ದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ತಾಲೂಕು ಪಂಚಾಯತ್‌ಗೆ ಅಧ್ಯಕ್ಷೆ ದಿವ್ಯಜ್ಯೋತಿ ಮಾತನಾಡಿ; ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ರಾಷ್ಟ್ರ ನಾಯಕರನ್ನು ನೆನೆಯುವ ಈ ಪುಣ್ಯದಿನ, ಸಾಂಕ್ರಾಮಿಕ ರೋಗದ ಸಂಕಷ್ಟದಲ್ಲಿರುವ ನಾವೆಲ್ಲಾ ಸರಕಾರ ಸೂಚಿಸಿದ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಿ, ಕೊರೋನಾ ಸೋಂಕಿನಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳೋಣಾ ಎಂದರು.


ತಾಲೂಕು ಪಂಚಾಯತ್ ಉಪಾಧ್ಯಕ್ಷೆ ವೇದಾವತಿ, ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಪಂಚಾಯತ್ ರಾಜ್ ಇಂಜಿನಿಯರಿಂಗ್ ಬೆಳ್ತಂಗಡಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸೂರ್ಯನಾರಾಯಣ ಭಟ್, ಲೋಕೋಪಯೋಗಿ ಇಲಾಖೆ ಬೆಳ್ತಂಗಡಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಶಿವಪ್ರಸಾದ್ ಅಜಿಲ, ಬೆಳ್ತಂಗಡಿ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ. ಜಿ., ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾ ಆ್ಯಗ್ನೆಸ್, ತಾಲೂಕು ವೈದ್ಯಾಧಿಕಾರಿ ಡಾl ಕಲಾಮಧು, ಗೃಹರಕ್ಷಕದಳದ ಬೆಳ್ತಂಗಡಿ ತಾಲೂಕು ಘಟಕದ ಮುಖ್ಯಸ್ಥ ಜಯಾನಂದ್ ಲಾಯ್ಲ, ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ನಿವೃತ್ತ ಸೈನಿಕ ಎಂ. ಆರ್. ಜೈನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಿಕ್ಷಕ ರಮೇಶ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸ್ವಾಗತಿಸಿದರು. ಪ್ರಸಕ್ತ ಶೈಕ್ಷಣಿಕ ವರ್ಷ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಹಾಗೂ ದ್ವಿತೀಯ ಸ್ಥಾನಿಯಾಗಿ ಮೂಡಿಬಂದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಜಯಾನಂದ್ ವಂದಿಸಿದರು.

Latest News

Related Posts