ಮಡಂತ್ಯಾರು ಕಾಲೇಜಿನ ಎನ್‌ಎಸ್‌ಎಸ್ ಘಟಕದಿಂದ ‘ಸದ್ಭಾವನಾ ದಿನ’

ಮಡಂತ್ಯಾರು ಕಾಲೇಜಿನ ಎನ್‌ಎಸ್‌ಎಸ್ ಘಟಕದಿಂದ  ‘ಸದ್ಭಾವನಾ ದಿನ’
Facebook
Twitter
LinkedIn
WhatsApp

ಮಡಂತ್ಯಾರು: ರಾಷ್ಟ್ರದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಇವರ ಜನ್ಮದಿನವಾದ ಆಗಸ್ಟ್ 20ನ್ನು ದೇಶದಾದ್ಯಂತ ಸದ್ಭಾವನಾ ದಿನವನ್ನಾಗಿ ಆಚರಿಸಲಾಗುತ್ತದೆ. ಈ ವರ್ಷ ಕೊರೋನಾ ಸೋಂಕು ಹರಡದಂತೆ ಮುಂಜಾಗ್ರತೆಯಾಗಿ ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕಾದ ಹಿನ್ನೆಲೆಯಲ್ಲಿ ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಕಾಲೇಜಿನ ಎನ್‌ಎಸ್‌ಎಸ್ ಘಟಕವು ಎನ್‌ಎಸ್‌ಎಸ್ ಸ್ವಯಂಸೇವಕರಿಗೆ ರಾಜೀವ್ ಗಾಂಧಿ ಜನ್ಮದಿನದ ಸಂದೇಶವನ್ನು ಹಂಚಿಕೊಳ್ಳಲು ಆನ್‌ಲೈನ್ ಕಾರ್ಯಕ್ರಮವನ್ನು ಆಯೋಜಿಸಿತು.
ಕಾಲೇಜಿನ ಪ್ರಾಂಶುಪಾಲರಾದ , ಡಾ.ಜೋಸೆಫ್ ಎನ್. ಎಂ. ಭಾಗವಹಿಸಿದವರನ್ನು ಉದ್ದೇಶಿಸಿ ಮಾತನಾಡಿ, ಸದ್ಭಾವನಾ ದಿನಾಚರಣೆಯ ಹಿನ್ನೆಲೆಯನ್ನು ತಿಳಿಸಿದರಲ್ಲದೇ; ವಿದ್ಯಾರ್ಥಿಗಳು ಶಾಂತಿ, ವಾತ್ಸಲ್ಯ ಮತ್ತು ಕೋಮು ಸೌಹಾರ್ದತೆಯಿಂದ ಬದುಕಬೇಕೆಂದು ತಿಳಿಸಿ; ಆದರ್ಶ ಸಮಾಜ ನಿರ್ಮಾಣಕ್ಕೆ ಕರೆ ಕೊಟ್ಟರು. ರಾಷ್ಟ್ರೀಯ ಏಕೀಕರಣದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕೊನೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳೆಲ್ಲರು ಸದ್ಭಾವನಾ ದಿನದ ಪ್ರಮಾಣವಚನ ಸ್ವೀಕರಿಸಿದರು. ಎನ್‌ಎಸ್‌ಎಸ್ ಘಟಕ 1ರ ಯೋಜನಾಧಿಕಾರಿ ಪ್ರೊ. ಜನಾರ್ಧನ್ ನಾಯರ್ ಸ್ವಾಗತಿಸಿದರು. ಘಟಕ 2 ರ ಯೋಜನಾಧಿಕಾರಿ ರಾಬಿನ್ ಜೋಸೆಫ್ ಸೇರಾ ಕಾರ್ಯಕ್ರಮ ನಿರೂಪಿಸಿದರು. ಗೂಗಲ್ ಮೀಟ್ ಮೂಲಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

Latest News

Related Posts