ಬೆಳ್ತಂಗಡಿ: ಸೌತ್ ಕೆನರಾ ಫೋಟೊಗ್ರಾಫರ್ಸ್ ಎಸೋಸಿಯೇಷನ್ ದ. ಕ. ಹಾಗೂ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ 18ನೇ ವಾರ್ಷಿಕ ಮಹಾಸಭೆ ಸೆಪ್ಟೆಂಬರ್ 5 ರಂದು ಗುರುವಾಯನಕೆರೆ ಶ್ರೀ ಅಯ್ಯಪ್ಪ ಗುಡಿ ಬಳಿಯಿರುವ ಛಾಯಭವನದಲ್ಲಿ ವಲಯದ ಅಧ್ಯಕ್ಷ ಸುರೇಶ್ ಬಿ. ಕೌಡಂಗೆಯವರ ಅಧ್ಯಕ್ಷತೆಯಲ್ಲಿ ಜರಗಿತು. ದ. ಕ. ಹಾಗೂ ಉಡುಪಿ ಜಿಲ್ಲಾ ಫೋಟೋಗ್ರಾಫರ್ಸ್ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ್ ಶೆಟ್ಟಿಗಾರ್ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಾ, ನಮ್ಮ ಛಾಯಾಗ್ರಾಹಣ ವೃತ್ತಿ ಉಳಿದರೆ ಮಾತ್ರ ಸಂಘಟನೆ ಬೆಳೆಯಬಹುದು. ನಮ್ಮ ಸದಸ್ಯರ ಕಷ್ಟಗಳನ್ನು ಅರಿತು ಅವರಿಗೆ ಸ್ಪಂದನೆ ನೀಡುವುದು ನಮ್ಮಲ್ಲರ ಕರ್ತವ್ಯ ಎಂದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಕೋಶಾಧಿಕಾರಿ ಆನಂದ ಎನ್. ಬಂಟ್ವಾಳ, ಜಿಲ್ಲಾ ಎಸ್. ಕೆ. ಪಿ. ವಿವಿದೋಧ್ಧೇಶ ಸಹಕಾರಿ ಸಂಘದ ನಿರ್ದೇಶಕ ವಿಲ್ಸನ್ ಜಾರ್ಜ್ ಗೊನ್ಸಾಲ್ವಿಸ್ ಭಾಗವಹಿಸಿದ್ದರು. ವಲಯದ ಗೌರವಾಧ್ಯಕ್ಷ ಎನ್. ಎ. ಗೋಪಾಲ್ ಅಳದಂಗಡಿ. ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ. ಸುವರ್ಣ, ಪ್ರಧಾನ ಕಾರ್ಯದರ್ಶಿ ಗಂಗಾಧರ ಉಜಿರೆ, ಕೋಶಾಧಿಕಾರಿ ಪ್ರಭಾಕರ ಕಕ್ಕಿಂಜೆ, ಉಪಾಧ್ಯಕ್ಷ ಮಹಾವೀರ ಜೈನ್, ಗಣೇಶ್ ವೇಣೂರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಲಯದ ಸದಸ್ಯರ ಮಕ್ಕಳನ್ನು ಅಭಿನಂದಿಸಲಾಯಿತು. ಸರಕಾರ ಸೂಚಿಸಿದ ಕೊವಿಡ್-19 ಸುರಕ್ಷತಾ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಿಕೊಂಡು ಮಹಾಸಭೆ ನಡೆಸಲಾಯಿತು ಗಣೇಶ್ ನಾರಾವಿ ಪ್ರಾರ್ಥಿಸಿದರು. ಕೆ. ವಸಂತ್ ಶರ್ಮ ಉಜಿರೆ ಕಾರ್ಯಕ್ರಮ ನಿರೂಪಿಸಿ, ಅಧ್ಯಕ್ಷ ಸುರೇಶ್ ಬಿ ಕೌಡಂಗೆ ಸ್ವಾಗತಿಸಿ, ದಾಮೋದರ್ ವಂದಿಸಿದರು.






