ಕೃಷಿ ಇಲಾಖೆಯಿಂದ ಟ್ರಾಕ್ಟರ್ ವಿತರಣೆ

ಕೃಷಿ ಇಲಾಖೆಯಿಂದ ಟ್ರಾಕ್ಟರ್ ವಿತರಣೆ
Facebook
Twitter
LinkedIn
WhatsApp

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬೆಳ್ತಂಗಡಿಯ ವತಿಯಿಂದ ನವೆಂಬರ್ 4ರಂದು ಕಛೇರಿಯ ವಠಾರದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಾರವರು ಆಯ್ಕೆಯಾದ ಅರ್ಹ ಕೃಷಿಕ ಫಲಾನುಭವಿಗಳಿಗೆ ಟ್ರಾಕ್ಟರ್ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್, ಬೆಳ್ತಂಗಡಿ ತಾಲೂಕು ಪಂಚಾಯತ್ ಅಧ್ಯಕ್ಷೆ ದಿವ್ಯಜ್ಯೋತಿ, ಉಪಾಧ್ಯಕ್ಷೆ ವೇದಾವತಿ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷೆ ಮಮತಾ ಎಂ. ಶೆಟ್ಟಿ, ಸದಸ್ಯರಾದ ಕೊರಗಪ್ಪ ನಾಯ್ಕ ಹಾಗೂ ಸೌಮ್ಯಲತಾ ಜಯಂತ್ ಗೌಡ, ಬೆಳ್ತಂಗಡಿ ತಾಲೂಕು ಪಂಚಾಯತ್‌ನ ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷ ಶಶಿಧರ ಎಂ. ಕಲ್ಮಂಜ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಜಿತ್, ಕೃಷಿ ಅಧಿಕಾರಿಗಳಾದ ಚಿದಾನಂದ ಹೂಗಾರ್ ಹಾಗೂ ಹುಮೇರಾ ಜಬೀನ್ ಮತ್ತಿತರರು ಉಪಸ್ಥಿತರಿದ್ದರು.

Latest News

Related Posts